Breaking News

ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ವಕೀಲಿ ವೃತ್ತಿಯಲ್ಲಿನ ಕೌಶಲಗಳು ಹಾಗೂ ಉದ್ಯೋಗಾವಕಾಶ ಕುರಿತ ವಿಶೇಷ ಉಪನ್ಯಾಸ

Spread the love

ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ವಕೀಲಿ ವೃತ್ತಿಯಲ್ಲಿನ ಕೌಶಲಗಳು ಹಾಗೂ ಉದ್ಯೋಗಾವಕಾಶ ಕುರಿತ ವಿಶೇಷ ಉಪನ್ಯಾಸ

ಯುವ ಭಾರತ ಸುದ್ದಿ ಬೆಳಗಾವಿ :
ಯುವ ನ್ಯಾಯವಾದಿಗಳು ವೃತ್ತಿಪರ ಕೌಶಲ ರೂಢಿಸಿಕೊಂಡು ಸಮಾಜದ ಅಭಿವೃದ್ಧಿಗೆ ಪರಿಶ್ರಮಿಸಬೇಕು ಎಂದು ದೆಹಲಿಯ ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ಮಂಜುನಾಥ ಮೇಳೆದ ತಿಳಿಸಿದರು.

ಗುರುವಾರ ನಗರದ ಕೆಎಲ್ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ವತಿಯಿಂದ ಲಿಂಗರಾಜ ಮಹಾವಿದ್ಯಾಲಯದ ಕೇಂದ್ರ
ಸಭಾಗೃಹದಲ್ಲಿ ವಕೀಲಿ ವೃತ್ತಿಯಲ್ಲಿನ ಕೌಶಲಗಳು ಹಾಗೂ ಉದ್ಯೋಗಾವಕಾಶಗಳ ಕುರಿತ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಕಾನೂನು ವಿದ್ಯಾರ್ಥಿಗಳು
ನಿರಂತರವಾದ ಅಧ್ಯಯನ, ಸಾಮಾಜಿಕ ಕಾಳಜಿ, ಕಠಿಣ ಪರಿಶ್ರಮ, ವೃತ್ತಿಪರ ಕೌಶಲಗಳನ್ನು ಮೈಗೂಡಿಸಿಕೊಳ್ಳಬೇಕು. ಇಂದಿನ ದಿನಮಾನಗಳಲ್ಲಿ ಲಭ್ಯವಿರುವ ವಿನೂತನ ಅವಕಾಶಗಳ ಸದುಪಯೋಗ ಪಡೆದುಕೊಂಡು ವೃತ್ತಿ ಜೀವನದಲ್ಲಿ ಸಾಧನೆ ಮಾಡಬೇಕು ಎಂದು ಅವರು ತಿಳಿಸಿದರು.

ನಾನು 25 ವರ್ಷಗಳ ಹಿಂದೆ ಬೆಳಗಾವಿ ಬಿ.ವಿ.ಬೆಲ್ಲದ ಕಾಲೇಜು ವಿದ್ಯಾರ್ಥಿಯಾಗಿದ್ದೆ ಎಂದು ಹಳೆಯ ನೆನಪುಗಳನ್ನು ಸ್ಮರಿಸಿಕೊಂಡ ಅವರು, ನಾನು ಕನ್ನಡ ಮಾಧ್ಯಮ ವಿದ್ಯಾರ್ಥಿಯಾಗಿದ್ದೆ. ಇಂದು ವೃತ್ತಿ ಜೀವನಕ್ಕೆ ಇಂಗ್ಲಿಷ್ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ
ಭಾಷೆ ಅತ್ಯಂತ ಪ್ರಬಲ ಸಾಧನ. ಜತೆಗೆ ಸಂವಹನ ಮುಖ್ಯ. ಕಾನೂನಿನ ಪ್ರತಿ ಶಬ್ದವು ಮುಖ್ಯ. ನೀವು ನಿಮ್ಮ ವೃತ್ತಿ ಜೀವನದಲ್ಲಿ ಸಾಧನೆ ಮಾಡಬೇಕು ಎಂದರೆ ಭಾಷೆಯ ಸಂವಹನ ಕಲೆಯನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಬಿ. ಜಯಸಿಂಹ ಮಾತನಾಡಿ, ವಿದ್ಯಾರ್ಥಿಗಳು ಆಧುನಿಕವಾಗಿ ಕಾನೂನು ಕ್ಷೇತ್ರದಲ್ಲಿ ಸಾಕಷ್ಟು ಬೆಳವಣಿಗೆಯಾಗಿದೆ. ಅತ್ಯಾಧುನಿಕವಾಗಿ ಲಭ್ಯವಾಗುವ ಕಾನೂನು ಮಾಹಿತಿಗಳ ಸದುಪಯೋಗ ಪಡೆದುಕೊಂಡು ವೃತ್ತಿ ಜೀವನವನ್ನು ಉಜ್ವಲಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮಂಜುನಾಥ ಮೇಳೆದ ಅವರು ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರ ಕಾನೂನು ಕ್ಷೇತ್ರದ ಕುರಿತ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಎಲ್‌ಎಲ್‌ಬಿ ಅಂತಿಮ ವರ್ಷದ ವಿದ್ಯಾರ್ಥಿನಿ ತೇಜಸ್ವಿನಿ ವಾವರೆ ಪ್ರಾರ್ಥಿಸಿದರು. ಪ್ರಾಧ್ಯಾಪಕಿ ಸವಿತಾ ಪಟ್ಟಣಶೆಟ್ಟಿ ಸ್ವಾಗತಿಸಿದರು. ಪ್ರಾಧ್ಯಾಪಕಿ ಡಾ. ಅಶ್ವಿನಿ ಹಿರೇಮಠ ವಂದಿಸಿದರು. ಎಲ್‌ಎಲ್‌ಬಿ ಅಂತಿಮ ವರ್ಷದ ವಿದ್ಯಾರ್ಥಿನಿ ತೇಜಸ್ವಿನಿ ಖೇಮಜಿ ನಿರೂಪಿಸಿದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

eleven + six =