ಮೂರು ಕೃತಿಗಳ ಲೋಕಾರ್ಪಣೆ – ಗೌರವ ಸನ್ಮಾನ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ

ಬೆಳಗಾವಿ :
ಬಸವರಾಜ ಕಟ್ಟಿಮನಿ ಪ್ರತಿಷ್ಠಾನ, ಬೆಳಗಾವಿ ಇವರ ಸಹಯೋಗದಲ್ಲಿ ಶನಿವಾರ (ಜು.8 ) ರಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿ ಕೇಂದ್ರ ಸಭಾಭವನದಲ್ಲಿ ಮೂರು ಕೃತಿಗಳ ಲೋಕಾರ್ಪಣೆ – ಗೌರವ ಸನ್ಮಾನ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.
ಬೆಳಗಾವಿ ಕೆ.ಎಲ್.ಇ. ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ ಉದ್ಘಾಟಸಲಿದ್ದಾರೆ. ಧಾರವಾಡದ ಹಿರಿಯ ಸಾಹಿತಿ ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ಕೃತಿಗಳ ಲೋಕಾರ್ಪಣೆ ಮಾಡಲಿದ್ದಾರೆ.
ಬೆಳಗಾವಿಯ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಅಧ್ಯಕ್ಷತೆ ವಹಿಸಲಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
YuvaBharataha Latest Kannada News