ಪರಿಸರ ರಕ್ಷಣೆ ಹಾಗೂ ಕ್ರೀಡೆಗಳಿಗೆ ದೇಶದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕಾಗಿದೆ-ಸಚಿವ ಸತೀಶ ಜಾರಕಿಹೊಳಿ.!
ಗೋಕಾಕ: ಪರಿಸರ ರಕ್ಷಣೆ ಹಾಗೂ ಕ್ರೀಡೆಗಳಿಗೆ ದೇಶದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಅವರು, ಸೋಮವಾರದಂದು ನಗರದ ಮಹರ್ಷಿ ಶ್ರೀ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅರಣ್ಯ ಇಲಾಖೆಯಿಂದ ಹಮ್ಮಿಕೊಂಡ ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.
೧೪೦ಕೋಟಿಗಿಂತ ಹೆಚ್ಚಿನ ಜನಸಂಖ್ಯೆ ಇರುವ ನಮ್ಮ ದೇಶದಲ್ಲಿ ಕ್ರೀಡೆಗಳಲ್ಲಿ ನಿರೀಕ್ಷಿತ ಸಾಧನೆಯಾಗಿಲ್ಲ. ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ ಅಂತರಾಷ್ಟಿçÃಯ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವ ಕಾರ್ಯದಲ್ಲಿ ನಾವೆಲ್ಲಾ ಪಾಲ್ಗೊಳ್ಳಬೇಕಿದೆ. ಇಲಾಖೆಯ ಮುಖ್ಯಸ್ಥರು ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕಾರ್ಯವಾಗಬೇಕು. ಕೆಲವೇ ಇಲಾಖೆಗಳಲ್ಲಿ ಇಂತಹ ಕಾರ್ಯವಾಗುತ್ತಿದ್ದು ಉಳಿದ ಇಲಾಖೆಗಳು ಕ್ರೀಡೆಗಳನ್ನು ಉತ್ತೇಜಿಸುವಂತೆ ಕರೆ ನೀಡಿದ ಅವರು, ಅರಣ್ಯ ಇಲಾಖೆ ಇಂತಹ ಕಾರ್ಯಗಳ ಮೂಲಕ ರಾಷ್ಟçದಲ್ಲಿ ಮಾದರಿಯಾಗಿ ಕಾರ್ಯನಿರ್ವಹಿಸಲಿ ಎಂದು ಹಾರೈಸಿದರು.
ಎರಡು ದಿನ ನಡೆಯುವ ಈ ಕ್ರೀಡಾಕೂಟದಲ್ಲಿ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಅರಣ್ಯ ಇಲಾಖೆಯ ೪೦೦ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಯುವ ನಾಯಕ ಅಮರನಾಥ ಜಾರಕಿಹೊಳಿ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚೌಹಾನ, ಪ್ರಾದೇಶಿಕ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎಸ್ ಕೆ ಕಲ್ಲೋಳಿಕರ, ಪಿ ಶ್ರೀಧರ, ಕೆ ಸ್ ಗೊವರ, ಸಿ ಜಿ ಮಿರ್ಜಿ, ಶಿವಶರಣಯ್ಯ, ವನಿತಾ ಆರ್, ಶಿವಾನಂದ ನಾಯಕವಾಡಿ, ಡಿವೈಎಸ್‌ಪಿ ಡಿ ಎಚ್ ಮುಲ್ಲಾ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ವಸೀಮರಾಜ ತೇನಗಿ, ಸುನೀತಾ ನಿಂಬರಗಿ, ಗೋಕಾಕ ವಲಯ ಅರಣ್ಯಾಧಿಕಾರಿ ಸಂಜೀವ ಸಂಸುದ್ದಿ ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಇದ್ದರು.