ಗೋಕಾಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹಿಸಿ ನಾಳೆ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ- ಮುರುಘರಾಜೇಂದ್ರ ಮಹಾಸ್ವಾಮಿಗಳು.!
ಗೋಕಾಕ: ಗೋಕಾಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹಿಸಿ ನಾಳೆ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವದೆಂದು ಗೋಕಾಕ ಜಿಲ್ಲಾ ಹೋರಾಟ ಚಾಲನಾ ಸಮಿತಿ ಅಧ್ಯಕ್ಷರಾದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.
ಅವರು, ಮಂಗಳವಾರದAದು ನಗರದ ಶೂನ್ಯ ಸಂಪಾದನ ಮಠದಲ್ಲಿ ಕರೇದ ಪತ್ರಿಕಾಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡುತ್ತ ಬುಧವಾರ ಮುಂಜಾನೆ ೧೦ಗಂಟೆಗೆ ನಗರದ ಶ್ರೀ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಅಪ್ಸರಾ ಕೂಟ, ಬಾಫನಾ ಕೂಟ, ಅಜಂತಾ ಕೂಟ ಮುಖಾಂತರ ಮೆರವಣಿಗೆ ಹೋರಟು ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ತಹಶೀಲದಾರ ಮುಖಾಂತರ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗುವದು ಎಂದರು.
ಸಚಿವರಾದ ಸತೀಶ ಜಾರಕಿಹೊಳಿ, ಶಾಸಕರುಗಳಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಲಖನ ಜಾರಕಿಹೊಳಿ ಅವರು ಜಿಲ್ಲಾ ರಚನೆಗಾಗಿ ಸರಕಾರಕ್ಕೆ ಮನವಿ ಮಾಡುತ್ತಿದ್ದು ಅವರಿಗೆ ಬೆಂಬಲ ನೀಡಲು ಗೋಕಾಕ ಮತ್ತು ಮೂಡಲಗಿ ತಾಲೂಕಿನ ಎಲ್ಲ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಅವಳಿ ತಾಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಿ ಆರ್ ಕೋಟಗಿ, ಉಪಾಧ್ಯಕ್ಷ ಎಸ್ ಎಸ್ ಜಿಡ್ಡಿಮನಿ, ಆನಂದ ಕುಲಕರ್ಣಿ, ಎಸ್ ವಿ ದೇಮಶೆಟ್ಟಿ, ಶಂಕರ ಗೋರೋಶಿ, ಅಶೋಕ ಪೂಜಾರಿ, ಜಯಾನಂದ ಹುಣಚ್ಯಾಳ, ಮಾಜಿ ಜಿಪಂ ಅಧ್ಯಕ್ಷ ಬಸನಗೌಡರ, ದಸ್ತಗೀರಸಾಬ ಪೈಲವಾನ, ಬಸವರಾಜ ಖಾನಪ್ಪನವರ, ಸುಧೀರ ಜೋಡಟ್ಟಿ, ಬಸವರಾಜ ಆರೇನ್ನವರ, ಭೀಮಶಿ ಭರಮನ್ನವರ, ಬಾಳೇಶ ಗಿಡ್ಡನವರ, ಸುರೇಶ ಪತ್ತಾರ ಸೇರಿದಂತೆ ಅನೇಕರು ಇದ್ದರು.