Breaking News

ಅಭ್ಯರ್ಥಿ ಯಾರೇ ಆದರೂ ಕಾರ್ಯಕರ್ತರು ಅವರನ್ನು ಗೆಲ್ಲಿಸಿ-ಸಂಜಯ ಪಾಟೀಲ.!

Spread the love

ಅಭ್ಯರ್ಥಿ ಯಾರೇ ಆದರೂ ಕಾರ್ಯಕರ್ತರು ಅವರನ್ನು ಗೆಲ್ಲಿಸಿ-ಸಂಜಯ ಪಾಟೀಲ.!


ಗೋಕಾಕ: ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಮೂರನೇ ಬಾರಿ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವ ಗುರಿಯೊಂದಿಗೆ ಕಾರ್ಯಕರ್ತರು ಕಾರ್ಯಪ್ರವೃತ್ತರಾಗುವಂತೆ ಮಾಜಿ ಶಾಸಕ, ಬಿಜೆಪಿ ಪಕ್ಷದ ಚುನಾವಣಾ ಜಿಲ್ಲಾ ಸಹ ಸಂಚಾಲಕ ಸಂಜಯ ಪಾಟೀಲ ಹೇಳಿದರು.
ಅವರು, ಗುರುವಾರದಂದು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಜರುಗಿದ ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಳದಿAದ ಆಯೋಜಿಸಿದ್ಧ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ದೇಶದಲ್ಲಿಯೇ ರಾಜಕೀಯವಾಗಿ ಪ್ರಸಿದ್ಧಿ ಪಡೆದ ಗೋಕಾಕ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಪ್ರಚಾರ ಸಭೆಯನ್ನು ಪ್ರಾರಂಭಿಸಲಾಗುತ್ತಿದೆ. ಅಭ್ಯರ್ಥಿ ಯಾರೇ ಆದರೂ ಕಾರ್ಯಕರ್ತರು ಅವರನ್ನು ಗೆಲ್ಲಿಸಿ ಮೋದಿಯವರನ್ನು ಪ್ರಧಾನಿಯನ್ನಾಗಿ ಮರು ಆಯ್ಕೆ ಮಾಡಲು ಶ್ರಮಿಸಬೇಕು ಎಂದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದೊಂದಿಗೆ ಐನೂರು ವರ್ಷಗಳ ಹೋರಾಟಕ್ಕೆ ಪ್ರಧಾನಿ ಮೋದಿ ಜಯ ತಂದರು. ದೇಶವನ್ನು ಜಗತ್ತೇ ಮೆಚ್ಚುವಂತೆ ಅಭಿವೃದ್ಧಿ ಕಾರ್ಯ ಮಾಡುತ್ತಿದ್ದಾರೆ. ನಮ್ಮ ದೇಶದ ಧರ್ಮ, ಸಂಸ್ಕೃತಿಯನ್ನು ಉಳಿಸಿ ದೇಶವನ್ನು ಬಲಿಷ್ಠಗೊಳಿಸುತ್ತಿದ್ದಾರೆ. ಜೂನ್ ೭ರಂದು ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡಲು ಕಾರ್ಯಕರ್ತರು ಇಂದಿನಿAದಲೆ ತಮ್ಮ ಕಾರ್ಯವನ್ನು ಆರಂಭಿಸಬೇಕು. ಶಾಸಕ ರಮೇಶ ಜಾರಕಿಹೊಳಿ ನೇತ್ರತ್ವದಲ್ಲಿ ಗೋಕಾಕ ಮತಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಗೆ ೫೦ಸಾವಿರಕ್ಕಿಂತ ಹೆಚ್ಚಿನ ಅಂತರದ ಮತಗಳು ಬರುವಂತೆ ಕಾರ್ಯಕರ್ತರು ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.

ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ ಮಾತನಾಡಿ, ಕಾರ್ಯಕರ್ತರ ಆಧಾರಿತ ಪಕ್ಷ ಬಿಜೆಪಿ ಪಕ್ಷವಾಗಿದೆ. ನಿಮ್ಮೆಲ್ಲರ ಹಾಗೂ ಶಾಸಕರ ಆಶೀರ್ವಾಧದಿಂದ ಬಿಜೆಪಿ ಅಭ್ಯರ್ಥಿಗಳೇ ಲೋಕಸಭೆಗೆ ಆಯ್ಕೆಯಾಗುತ್ತಿದ್ದಾರೆ. ಈ ಬಾರಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷಕ್ಕೆ ಪೂರಕವಾದ ವಾತಾವರಣವಿದ್ದು ಅದರ ಸದುಪಯೋಗಪಡಿಸಿಕೊಳ್ಳೋಣ ಎಂದರು.

ವೇದಿಕೆಯ ಮೇಲೆ ಬಿಜೆಪಿ ಪಕ್ಷದ ವಿಭಾಗ ಸಹ ಸಂಘಟನಾ ಕಾರ್ಯದರ್ಶಿ ಜಯಪ್ರಕಾಶ, ರಾಷ್ಟಿçÃಯ ಓಬಿಸಿ ಮೋರ್ಚಾ ಕರ‍್ಯಕಾರಿಣಿ ಸದಸ್ಯ ಲಕ್ಷö್ಮಣ ತಪಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಕೆ ವಿ ಪಾಟೀಲ, ಗೋಕಾಕ ಕ್ಷೇತ್ರದ ಚುನಾವಣಾ ಸಂಚಾಲಕ ಮುತ್ತೆಪ್ಪ ಮನ್ನಾಪುರ, ನಗರ ಹಾಗೂ ಗ್ರಾಮೀಣ ಮಂಡಳ ಅಧ್ಯಕ್ಷರುಗಳಾದ ಭೀಮಶಿ ಭರಮನ್ನವರ, ರಾಜೇಂದ್ರ ಗೌಡಪ್ಪಗೋಳ, ಅಲ್ಪ ಸಂಖ್ಯಾತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶಕೀಲ ಧಾರವಾಡಕರ ಇದ್ದರು.


Spread the love

About Yuva Bharatha

Check Also

ಬೋರಗಾಂವ ಪಟ್ಟಣದ ಶ್ರೀ ಅರಿಹಂತ ಕೋ,ಆಪ್ ಸೌಹಾರ್ಧ ಸಹಕಾರಿ ಬ್ಯಾಂಕ ವಿರುದ್ಧ ರೈತರ ಪ್ರತಿಭಟನೆ ಬ್ಯಾಂಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಕೆ.!

Spread the loveಬೋರಗಾಂವ ಪಟ್ಟಣದ ಶ್ರೀ ಅರಿಹಂತ ಕೋ,ಆಪ್ ಸೌಹಾರ್ಧ ಸಹಕಾರಿ ಬ್ಯಾಂಕ ವಿರುದ್ಧ ರೈತರ ಪ್ರತಿಭಟನೆ ಬ್ಯಾಂಕ ವ್ಯವಸ್ಥಾಪಕರಿಗೆ …

Leave a Reply

Your email address will not be published. Required fields are marked *

four × two =