ಕ್ರೀಡೆಗಳಿಗು ಹೆಚ್ಚಿನ ಮಹತ್ವ ನೀಡಬೇಕು. ಆರೋಗ್ಯದಿಂದ ನೆಮ್ಮದಿಯ ಜೀವನ ಸಾಧ್ಯ- ದೈಹಿಕ ಶಿಕ್ಷಣಾಧಿಕಾರಿ ಶ್ರೀಶೈಲ ಕುರಣಿ!
ಗೋಕಾಕ: ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಸಾಧಕರಾಗಲು ಸಹಕಾರಿಯಾಗುತ್ತದೆ ಎಂದು ಮುಧೋಳದ ದೈಹಿಕ ಶಿಕ್ಷಣಾಧಿಕಾರಿ ಶ್ರೀಶೈಲ ಕುರಣಿ ಹೇಳಿದರು.

ಗೋಕಾಕ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಸುವರ್ಣ ಮಹೋತ್ಸವ ನಿಮಿತ್ಯ ಹಮ್ಮಿಕೊಂಡ ಕ್ರೀಡಾಕೂಟವನ್ನು ಉದ್ಘಾಟಿಸುತ್ತಿರುವದು.
ಅವರು, ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಸುವರ್ಣ ಮಹೋತ್ಸವ ನಿಮಿತ್ಯ ಹಮ್ಮಿಕೊಂಡ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತ ವಿದ್ಯಾರ್ಥಿಗಳು ಪಠ್ಯದಷ್ಟೆ ಕ್ರೀಡೆಗಳಿಗು ಹೆಚ್ಚಿನ ಮಹತ್ವ ನೀಡಬೇಕು. ಆರೋಗ್ಯದಿಂದ ನೆಮ್ಮದಿಯ ಜೀವನ ಸಾಧ್ಯ ಅದು ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಲಭಿಸುತ್ತದೆ. ಪಾಲಕರು ಕ್ರೀಡೆ ಸೇರಿದಂತೆ ಇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವಂತೆ ಮಕ್ಕಳನ್ನು ಪ್ರೇರೆಪಿಸಿ ಅವರ ಸರ್ವಾಂಗೀಣ ಬೆಳವಣಿಗೆಗೆ ಶ್ರಮಿಸುವಂತೆ ಕರೆ ನೀಡಿದರು.ವೇದಿಕೆಯ ಮೇಲೆ ಅಂತರಾಷ್ಟಿçÃಯ ಕುಸ್ತಿಪಟು ಭರತ ಕುಡ್ಡೆಮ್ಮಿ, ಗೋಕಾಕ ದೈಹಿಕ ಶಿಕ್ಷಣಾಧಿಕಾರಿ ಎಲ್ ಕೆ ತೋರಣಗಟ್ಟಿ, ಆಡಳಿತಾಧಿಕಾರಿ ಎಸ್ ಡಿ ಮುರಗೋಡ, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಚಿತ್ರಾ ಹತಪಾಕಿ ಇದ್ದರು.
YuvaBharataha Latest Kannada News