ಮೂಡಲಗಿ: ಕರ್ನಾಟಕ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರನ್ನಾಗಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನಕುಮಾರ ಕಟೀಲು ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಕಳೆದ 30 ವರ್ಷಗಳ ಕಾಲ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಮುಖಂಡರಾಗಿ ಪಕ್ಷದ ಸಂಘಟನೆಗೆ ನಿರಂತರ ಶ್ರಮಿಸುತ್ತಾ ಬಂದಿರುವ ನೂತನ ರಾಜ್ಯಸಭಾ ಸದಸ್ಯರಾಗಿ ಆಯ್ಕೆಗೊಂಡ ಈರಣ್ಣ ಕಡಾಡಿ ಅವರು, ಈ ಮೊದಲು ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ, 2 ಸಲ ಬೆಳಗಾವಿ ಗ್ರಾಮೀಣ ಭಾಗದ ಜಿಲ್ಲಾ ಅಧ್ಯಕ್ಷರಾಗಿ, ಬೆಳಗಾವಿ ವಿಭಾಗದ ಪ್ರಭಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ರೈತ ಕುಟುಂಬದ ಶರಣಜೀವಿ, ನೇಗಿಲಯೋಗಿ ತಂದೆ ಭೀಮಪ್ಪ, ತಾಯಿ ದುಂಡಮ್ಮ ಅವರ ಜೇಷ್ಠ ಸುಪುತ್ರರಾಗಿ ಜನಸಿದ ಈರಣ್ಣ ಕಡಾಡಿ ಅವರ ಬಿಜೆಪಿ ಪಕ್ಷದ ನಿಷ್ಠಾವಂತ ಸೇವೆ ಗುರುತಿಸಿ ಬಿಜೆಪಿ ಪಕ್ಷದ ರಾಷ್ಟಿಯ ಹಾಗೂ ರಾಜ್ಯದ ನಾಯಕರು ಇವರನ್ನು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ.