Breaking News

ಬೆಳಗಾವಿ ಜಿಲ್ಲೆಗೆ 412 ಕೋಟಿ ರೂಪಾಯಿ ಅನುದಾನ ಬಿಡುಗಡೆ-ಬಿ ಎಸ್ ಯಡಿಯೂರಪ್ಪ..!!  

Spread the love

 

ಬೆಳಗಾವಿ ಜಿಲ್ಲೆಗೆ 412 ಕೋಟಿ ರೂಪಾಯಿ ಅನುದಾನ ಬಿಡುಗಡೆ-ಬಿ ಎಸ್ ಯಡಿಯೂರಪ್ಪ..!!

ಬೆಳಗಾವಿ ಜಿಲ್ಲೆಗೆ 412 ಕೋಟಿ ರೂಪಾಯಿ ಅನುದಾನ ಬಿಡುಗಡೆ-ಬಿ ಎಸ್ ಯಡಿಯೂರಪ್ಪ..!!

 

 

ಯುವ ಭಾರತ ಸುದ್ದಿ ಬೆಳಗಾವಿ:   ನೆರೆ ನಿರ್ವಹಣೆ ಸೇರಿದಂತೆ ತುರ್ತು ಕೆಲಸಗಳಿಗಾಗಿ ಬೆಳಗಾವಿ ಜಿಲ್ಲೆಗೆ 412 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಅತಿವೃಷ್ಟಿಗೆ ಸಂಬಂಧಿಸಿದಂತೆ ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಇಂದು ನಡೆದ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು 972 ಕೋಟಿ ರೂಪಾಯಿ ಮೌಲ್ಯದ ಆಸ್ತಿಹಾನಿಯ ಅಂದಾಜು ವರದಿ ನೀಡಿದ್ದಾರೆ. ನೆರೆಯಿಂದ ತೀವ್ರ ತೊಂದರೆ ಅನುಭವಿಸಿರುವ ಬೆಳಗಾವಿ ಜಿಲ್ಲೆಯಲ್ಲಿ ಮನೆಗಳ ನಿರ್ಮಾಣಕ್ಕೆ 174 ಕೋಟಿ ರೂಪಾಯಿ ಅನುದಾನ ‌ಬಿಡುಗಡೆ ಮಾಡಲಾಗಿದೆ ಎಂದರು.

ಅತಿವೃಷ್ಟಿಯಿಂದ ಸಂಭವಿಸಿರುವ ಹಾನಿಗೆ ಹೆಚ್ಚಿನ ಪರಿಹಾರ ಕೋರಲು ಮುಂದಿನ ವಾರ ದೆಹಲಿಗೆ ತೆರಳಿ ಕೇಂದ್ರ ಸರ್ಕಾರದ ಸಚಿವರಿಗೆ ಮನವಿ ಮಾಡಲಾಗುವುದು. ಶೀಘ್ರ ಎಲ್ಲಾ ನೆರೆ ಸಂತ್ರಸ್ತ ಪ್ರದೇಶಗಳ ಶಾಸಕರ ಸಭೆ ಕರೆದು ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡಲು ಯೋಜನೆ ರೂಪಿಸಲಾಗುವುದು. ಎಲ್ಲ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಕೋವಿಡ್-19 ಇರುವುದರಿಂದ ಎನ್.ಡಿ‌.ಆರ್.ಎಫ್. ಅನುದಾನದಡಿ ತುರ್ತು ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದರು.

ಬೆಳಗಾವಿ ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಮನೆ ಕಳೆದುಕೊಂಡಿರುವ ಬೆಳಗಾವಿಯ 44156 ಫಲಾನುಭವಿಗಳಿಗೆ 488 ಕೋಟಿ ಪರಿಹಾರ ಬಿಡುಗಡೆಯಾಗಿದೆ.

ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳಗಾವಿ-ಧಾರವಾಡ ಸಮಸ್ಯೆಗಳನ್ನು ಗಮನಕ್ಕೆ ಬಂದಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಆಧರಿಸಿ ಮನೆ ಹಾಗೂ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ,ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಜಗದೀಶ್ ಶೆಟ್ಟರ್, ಅವರು ಪ್ರವಾಹ‌ ನಿರ್ವಹಣೆ ಮತ್ತು ಪರಿಹಾರ ಕ್ರಮಗಳ ಬಗ್ಗೆ ಮಾತನಾಡಿದರು.

ಸಭೆಯಲ್ಲಿ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಎಲ್ಲರೊಡನೆ ಎಲ್ಲರ ಶ್ರೇಯೋಭಿವೃದ್ಧಿ ಬಯುಸುವ ಪ್ರಧಾನಿ ನರೇಂದ್ರ ಮೋದಿ-ರಮೇಶ ಜಾರಕಿಹೊಳಿ.!

Spread the loveಎಲ್ಲರೊಡನೆ ಎಲ್ಲರ ಶ್ರೇಯೋಭಿವೃದ್ಧಿ ಬಯುಸುವ ಪ್ರಧಾನಿ ನರೇಂದ್ರ ಮೋದಿ-ರಮೇಶ ಜಾರಕಿಹೊಳಿ.! ಗೋಕಾಕ: ಕಾಂಗ್ರೆಸ್ ಪಕ್ಷ ಎಸ್‌ಸಿ ಮತ್ತು …

Leave a Reply

Your email address will not be published. Required fields are marked *

2 + eleven =