
ಬೆಂಗಳೂರು : ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆಗಳು ಆರಂಭವಾಗಿದ್ದು, ಗ್ರಾಮಪಂಚಾಯಿತಿಗಳ ಮೀಸಲಾತಿಯ ಅಂತಿಮ ಗೆಜೆಟ್ ಹೊರಡಿಸಲಾಗಿದೆ.
ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಗೆ ಈ ಸಂಬಂಧ ಮಾಹಿತಿ ನೀಡಿದ್ದು, ಕೊಡಗು, ಮೈಸೂರು ಹಾಗೂ ರಾಯಚೂರು ಜಿಲ್ಲೆಗಳನ್ನು ಹೊರತುಪಡಿಸಿ 27 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳ ಮೀಸಲಾತಿಯ ಅಂತಿಮ ಗೆಜೆಟ್ ಹೊರಡಿಸಲಾಗಿದ್ದು, ಆ.31 ರೊಳಗೆ ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಸಿಸಿದೆ.
ಕಾಂಗ್ರೆಸ್ ವಿಧಾನ ಪರೀಷತ್ ಸದಸ್ಯ ಕೆ.ಸಿ.ಕೊಂಡಯ್ಯ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಚುನಾವಣಾ ಆಯೋಗ ಮಾಹಿತಿ ನೀಡಿದೆ.
YuvaBharataha Latest Kannada News