

ಬೆಳಗಾವಿ ಜಿಲ್ಲೆಗೆ ಹದಿನೆಂಟು ನೀರಾವರಿ ಯೋಜನೆಗಳು – ಡಿಪಿಆರ್ ತಯಾರಿಸಲು ಅನುಮತಿಸಿದ- ಸಚಿವ ರಮೇಶ್ ಜಾರಕಿಹೊಳಿ..!!

ಯುವ ಭಾರತ ಸುದ್ದಿ,
ಬೆಳಗಾವಿ ಜಿಲ್ಲೆಗೆ 11 ಹೊಸ ಏತ ನೀರಾವರಿ ಯೋಜನೆ ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಪ್ರಸ್ತಾಪಗಳಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮ ನಿಯಮಿತವು ಅನುಮತಿ ನೀಡಿದೆ.
ನಿನ್ನೆ ನಡೆದ ನಿಗಮದ ಅಂದಾಜು ಪರಿಶೀಲನಾ ಸಭೆಯಲ್ಲಿ ಈ 11 ಏತ ನೀರಾವರಿ ಯೋಜನೆ ಗಳ ಅನುಷ್ಠಾನಕ್ಕೆ ಸಂಬಂಧಿಸಿ ಚರ್ಚೆ ನಡೆಸಿ, ಈ ಯೋಜನೆಗಳಿಗೆ ಅವಶ್ಯವಿರುವ 9.91 ಟಿಎಂಸಿ ನೀರನ್ನು ಹಂಚಿಕೆ ಮಾಡಲು ಸಹಾ ಅನುಮೋದನೆ ನೀಡಲಾಗಿದೆ.
ಹಾಗೆಯೇ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲ್ಲೂಕುಗಳಲ್ಲಿ ಅನುಷ್ಠಾನಕ್ಕೆ ತರಲಾಗುವ ವಿವಿಧ ಏಳು ನೀರಾವರಿ ಯೋಜನೆ ಗಳಿಗೂ ಸಹಾ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮದ ಅಂದಾಜು ಪರಿಶೀಲನಾ ಸಭೆ ಅನುಮತಿ ನೀಡಿದೆ.
YuvaBharataha Latest Kannada News