ಉಭಯ ತಂಡಗಳ ವಿರುದ್ಧ ಕೇಸ್ ದಾಖಲಾಗಿರುವ ಬಗ್ಗೆ ಮಾತನಾಡಿದ ಸಚಿವರು, ಪ್ರಕರಣ ವಾಪಸ್ ಬಗ್ಗೆ ಸಿಎಂ ಜತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಎರಡು ಕಡೆಯವರ ಪ್ರಕರಣ ವಾಪಸ್ ಪಡೆಯಲು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಮೂರ್ತಿ ಅಧಿಕೃತ ಮಾಡೋ ವಿಚಾರದ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಗಲಭೆಗೆ ಸಂಬಂಧಪಟ್ಟಂತೆ ಉಭಯ ತಂಡಗಳ ವಿರುದ್ಧ ಕೇಸ್ ದಾಖಲಾಗಿರುವ ಬಗ್ಗೆ ಮಾತನಾಡಿದ ಸಚಿವರು, ಪ್ರಕರಣ ವಾಪಸ್ ಬಗ್ಗೆ ಸಿಎಂ ಜತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಎರಡು ಕಡೆಯವರ ಪ್ರಕರಣ ವಾಪಸ್ ಪಡೆಯಲು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಮೂರ್ತಿ ಅಧಿಕೃತ ಮಾಡೋ ವಿಚಾರದ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬೆಳಗಾವಿಯ ಪೀರನವಾಡಿ ಪ್ರತಿಮೆ ಕುರಿತಂತೆ ರಾಜ್ಯದಲ್ಲಿ ವಿವಾದ ಎದ್ದಿದ್ದು, ಭಾರೀ ಸದ್ದು ಮಾಡುತ್ತಿದೆ. ಸ್ವಾತಂತ್ರ್ಯ ಹೋರಾಟಗಾರ ರಾಯಣ್ಣನ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಿದ್ದಕ್ಕಾಗಿ ಮರಾಠಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಇತ್ತ ಕನ್ನಡ ಪರ ಸಂಘಟನೆಗಳು, ರಾಯಣ್ಣ ಅಭಿಮಾನಿಗಳು ರಾತ್ರೋ ರಾತ್ರಿ ಮೂರ್ತಿಯನ್ನು ಪೀರನವಾಡಿಯಲ್ಲಿ ಪ್ರತಿಷ್ಠಾಪನೆ ಮಾಡಿದ್ದರು.ಇದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದ್ದು ಪರಿಸ್ಥಿತಿ ನಿಯಂತ್ರಣ ಮಾಡಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಇದೀಗ ವಿವಾದ ಬಗೆ ಹರಿದಿದೆ. ಮತ್ತೆ ರಾಯಣ್ಣರ ಪ್ರತಿಮೆ ಪ್ರತಿಷ್ಟಾಪನೆ ಮಾಡಲಾಗಿದೆ.
YuvaBharataha Latest Kannada News
