Breaking News

ಮಾಜಿ ರಾಷ್ಟçಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಬಾಲಚಂದ್ರ ಜಾರಕಿಹೊಳಿ ಸಂತಾಪ.!

Spread the love


ಗೋಕಾಕ: ಭಾರತ ರತ್ನ, ಮಾಜಿ ರಾಷ್ಟçಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ.
ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ ಪ್ರಜೆಯಾಗಿ ಉತ್ತಮ ಕಾರ್ಯಭಾರ ನಿರ್ವಹಿಸಿದ್ದರು. ಇವರ ನಿಧನದಿಂದ ಇಡೀ ರಾಷ್ಟçಕ್ಕೆ ನಷ್ಟವಾಗಿದೆ. ಹಿರಿಯ ಮುತ್ಸದ್ಧಿ ಮತ್ತು ಮೌಲ್ಯಾಧಾರಿತ ವ್ಯಕ್ತಿಯನ್ನು ಕಳೆದುಕೊಂಡು ಭಾರತ ಬಡವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ.
ಭಾರತ ರತ್ನ, ಪದ್ಮವಿಭೂಷಣ ಸೇರಿದಂತೆ ಹಲವು ಉನ್ನತ ಪ್ರಶಸ್ತಿಗಳು ಇವರನ್ನು ಹುಡುಕಿಕೊಂಡು ಬಂದಿದ್ದವು. ಇವರ ಸ್ಮರಣ ಶಕ್ತಿ ಎಂತಹವರನ್ನು ವಿಸ್ಮಯಗೊಳಿಸುತ್ತಿತ್ತು. ಅಂತಹ ಅಪಾರ ಜ್ಞಾನಶಕ್ತಿಯನ್ನು ಹೊಂದಿದ್ದರಲ್ಲದೇ ಹಲವು ಭಾಷೆಗಳಲ್ಲಿ ಪಾಂಡಿತ್ಯ ಸಾಧಿಸಿದ್ದರು. ದೇಶಕಂಡ ಅತ್ಯುತ್ತಮ ರಾಷ್ಟçಪತಿಗಳಲ್ಲಿ ಪ್ರಣಬ್ ಮುಖರ್ಜಿ ಒಬ್ಬರಾಗಿದ್ದರು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪದಲ್ಲಿ ತಿಳಿಸಿದ್ದಾರೆ.


Spread the love

About Yuva Bharatha

Check Also

ಸಮಾಜದ ಸುಧಾರಣೆಯಲ್ಲಿ ಶಿಕ್ಷಣವು ಮಹತ್ತರ ಪಾತ್ರ ವಹಿಸುತ್ತದೆ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಗೋಕಾಕ; ಸಮಾಜದ ಸುಧಾರಣೆಯಲ್ಲಿ ಶಿಕ್ಷಣವು ಮಹತ್ತರ ಪಾತ್ರ ವಹಿಸುತ್ತದೆ. ನಮ್ಮ ಮೂಡಲಗಿ ವಲಯವು ಶಿಕ್ಷಣದಲ್ಲಿ ಪ್ರಗತಿಯನ್ನು …

Leave a Reply

Your email address will not be published. Required fields are marked *

5 + 4 =