ಗೋಕಾಕ: ಆಹಾರ ಅರಸಿ ಗ್ರಾಮಕ್ಕೆ ಬಂದ ಹೆಬ್ಬಾವನ್ನು ಸ್ಥಳೀಯ ಯುವಕರ ಸಹಾಯದಿಂದ ರಕ್ಷಿಸಿ ಅರಣ್ಯ ಇಲಾಖೆಯವರು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಬುಧವಾರದಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕಿನ ಧುಪದಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಸುಮಾರು ೧೫ ಕೆಜಿ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಸ್ಥಳೀಯ ಯುವಕರು ಹೆಬ್ಬಾವನ್ನು ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಹಿನ್ನಲೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಹೆಬ್ಬಾವನ್ನು ಸುರಕ್ಷಿತವಾಗಿ ತಾಲೂಕಿನ ಕೊಣ್ಣೂರು ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಮರಳಿಸಿದರು.
ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ಕೆ ಎನ್ ವನ್ನೂರ, ಅರಣ್ಯ ಇಲಾಖೆಯ ಸಿಬ್ಬಂಧಿಗಳಾದ ಎಚ್ ಎಸ್ ಇಂಗಳಗಿ, ಅಶೋಕ ಮದುರೆ, ಗಲಗಲಿ ಸೇರಿದಂತೆ ಇತರರು ಇದ್ದರು.
