ಮೂಡಲಗಿ : ತಾಲೂಕಿನ ಅರಭಾವಿ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷರಾಗಿ ಲಕ್ಷ್ಮಣ ನಿಂಗನ್ನವರ ಮತ್ತು ಉಪಾಧ್ಯಕ್ಷರಾಗಿ ಸುಶೀಲಾ ಮಹಾಂತೇಶ ಸಗರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ ದಿಲ್‍ಶಾದ ಮಹಾತ ಪ್ರಕಟಿಸಿದರು.
ಇಂದಿಲ್ಲಿ ಅರಭಾವಿ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಜರುಗಿದ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯು ನಡೆಯಿತು ಎಂದು ಹೇಳಿದ್ದಾರೆ.
ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿದ್ದರೆ, ಉಪಾಧ್ಯಕ್ಷ ಸ್ಥಾನವು ಹಿಂದುಳಿದ ಬ ವರ್ಗಕ್ಕೆ ಮೀಸಲಿತ್ತು.
ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ತಹಶೀಲ್ದಾರ ಮಹಾತ ಅವರು ಅಭಿನಂದಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಸರ್ವ ಸದಸ್ಯರು, ಮುಖ್ಯಾಧಿಕಾರಿ ಕೆ.ಬಿ. ಬೆಣ ್ಣ ಮುಂತಾದವರು ಉಪಸ್ಥಿತರಿದ್ದರು.
ಅಭಿವೃದ್ಧಿಗೆ ಶ್ರಮಿಸುವೆ : ಅರಭಾವಿ ಪಟ್ಟಣದ ಅಭಿವೃದ್ಧಿಗಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಶ್ರಮಿಸುವುದಾಗಿ ನೂತನ ಅಧ್ಯಕ್ಷ ಲಕ್ಷ್ಮಣ ನಿಂಗನ್ನವರ ಹೇಳಿದರು.
ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿದ ಅವರು, ನನ್ನ ಮೇಲೆ ಪ್ರೀತಿ-ವಿಶ್ವಾಸವನ್ನಿಟ್ಟು ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಸರ್ವ ಸದಸ್ಯರು ಅಧ್ಯಕ್ಷ ಸ್ಥಾನವನ್ನು ಕಲ್ಪಿಸಿಕೊಟ್ಟಿದ್ದಾರೆ. ಈ ಸ್ಥಾನದ ಘನತೆ ಗೌರವವನ್ನು ಎತ್ತಿ ಹಿಡಿಯುವುದಾಗಿ ಹೇಳಿದರು.
ಅಭಿವೃದ್ಧಿ ಕಾರ್ಯಗಳಲ್ಲಿ ಪಪಂ ಸದಸ್ಯರು ಹಾಗೂ ಹಿರಿಯರ ಸಹಕಾರ ಅಗತ್ಯವಾಗಿದ್ದು, ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಪಟ್ಟಣದ ಏಳ್ಗೆಗಾಗಿ ಶ್ರಮಿಸುವುದಾಗಿ ನಿಂಗನ್ನವರ ತಿಳಿಸಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕರಾದ ನಾಗಪ್ಪ ಶೇಖರಗೋಳ ಮತ್ತು ದಾಸಪ್ಪ ನಾಯಿಕ ಅವರು ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶಂಕರ ಬಿಲಕುಂದಿ, ಭೀಮಶಿ ಹಳ್ಳೂರ, ಮುತ್ತೆಪ್ಪ ಝಲ್ಲಿ, ನಿಂಗಪ್ಪ ಈಳಿಗೇರ, ಸಾತಪ್ಪ ಜೈನ್, ಯಲ್ಲಪ್ಪ ಸತ್ತಿಗೇರಿ, ಅಶೋಕ ಖಂಡ್ರಟ್ಟಿ, ನಿಂಗಪ್ಪ ಕಡ್ಡಿ, ಬಿ.ಟಿ. ಸಂಪಗಾಂವಿ, ಕೆಂಚಪ್ಪ ಮಂಟೂರ, ಹನಮಂತ ಚಿಪ್ಪಲಕಟ್ಟಿ, ಸಂಜು ಖಾನಪ್ಪನವರ, ಸುಭಾಸ ಚಂಡುಗೋಳ, ಕುಮಾರ ಮಾಳೇದವರ, ಮುಂತಾದವರು ಉಪಸ್ಥಿತರಿದ್ದರು.