ಗೋಕಾಕ: ಪ್ರಧಾನಿ ನರೇಂದ್ರ ಮೋದಿಜಿ ಅವರ ಕನಸಿನ ಕೂಸಾದ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನಕ್ಕೆ ಪೂರಕವಾಗಿ ಗೋಕಾಕ ನಗರ ಮಹಿಳಾ ಮೋರ್ಚಾ ವತಿಯಿಂದ ಬಡ ಕುಟುಂಬದ ಹೆಣ್ಣು ಮಕ್ಕಳಿಗಾಗಿ ದಾನಿಗಳ ಸಹಾಯದಿಂದ ಸುಕನ್ಯಾ ಸಮೃದ್ಧಿ ಯೋಜನೆ ಫಲಾನುಭವಿಗಳನ್ನಾಗಿ ಮಾಡಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು.
ಅವರು, ಬಿಜೆಪಿ ಗೋಕಾಕ ನಗರ ಮಹಿಳಾ ಮೋರ್ಚಾ ವತಿಯಿಂದ ಸಚಿವ ರಮೇಶ ಜಾರಕಿಹೊಳಿ ಅವರ ಗೃಹ ಕಛೇರಿಯಲ್ಲಿ ಹಮ್ಮಿಕೊಳ್ಳಲಾದ ಸುಕನ್ಯಾ ಸಮೃದ್ಧಿ ಯೋಜನೆ ಫಲಾನುಭವಿಗಳಿಗೆ ಪಾಸ ಬುಕ್ ವಿತರಣಾ ಸಮಾರಂಭ ಕಾರ್ಯಕ್ರಮದಲ್ಲಿ ೧೦೧ ಫಲಾನುಭವಿ ಮಕ್ಕಳಿಗೆ ಸುಕನ್ಯಾ ಸಮೃದ್ಧಿಯೋಜನೆಯ ಪಾಸ್ ಬುಕ್ ವಿತರಿಸಿ ಮಾತನಾಡಿದರು.
೧೦೧ ಫಲಾನುಭವಿ ಮಕ್ಕಳಿಗೆ ಸುಕನ್ಯಾ ಸಮೃದ್ಧಿಯೋಜನೆಯನ್ನು ತಲುಪಿಸಿದ ಗೋಕಾಕ ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ ವಡೇಯರ ಹಾಗೂ ತಂಡದ ಕಾರ್ಯ ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ನಗರಾಧ್ಯಕ್ಷ ಜಯಾನಂದ ಹುಣಚ್ಯಾಳಿ, ಮಹಿಳಾ ಮೋರ್ಚಾದ ಜ್ಯೋತಿ ಕೋಲ್ಹಾರ, ನೇತ್ರಾ ಕುರಬೇಟ, ಮಂಜು ಪ್ರಭುನಟ್ಟಿ, ಶ್ರೀನಿವಾಸ ಗೌಡ ಸೇರಿದಂತೆ ಮಹಿಳಾ ಮೋರ್ಚಾ ಹಾಗೂ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
