ಪಶ್ಚಿಮಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸಾಚಾರ ಖಂಡಿಸಿ ಗೋಕಾಕ ಬಿಜೆಪಿ ಮಹಿಳಾ ಮೋರ್ಚಾದಿಂದ ಮೌನ ಪ್ರತಿಭಟನೆ.!
ಯುವ ಭಾರತ ಸುದ್ದಿ, ಗೋಕಾಕ: ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಟಿಎಮ್‌ಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಟಿಎಮ್‌ಸಿ ಪಕ್ಷದ ಕಾರ್ಯಕರ್ತರಿಗೆ ಕಠೀಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೌನ ಪ್ರತಿಭಟನೆ ಮೂಲಕ ಶುಕ್ರÀವಾರದಂದು ತಹಶೀಲದಾರರಿಗೆ ಮನವಿ ಸಲ್ಲಿಸಿದರು.
ಪಶ್ಚಿಮ ಬಂಗಾಲ ರಾಜ್ಯದಲ್ಲಿ ಮೇ.೨ ರಂದು ವಿಧಾನಸಭಾ ಫಲಿತಾಂಶದ ನಂತರ ಆರು ಜನ ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದೆ. ನೂರಾರು ಬಿಜೆಪಿ ಕಾರ್ಯಕರ್ತರ ಮನೆಗಳಿಗೆ ತೆರಳಿ ಹಲ್ಲೆ ಮಾಡಿದ್ದು, ಕಾರ್ಯಕರ್ತರು ಗಾಯಗೊಂಡಿದ್ದಾರೆ. ಪಶ್ಚಿಮ ಬಂಗಾಲದ ಕೆಲವೆಡೆ ಬಿಜೆಪಿ ಮಹಿಳಾ ಕಾರ್ಯಕರ್ತರ ಮೇಲೆ ಮಾನಭಂಗ ಮಾಡುವ ಯತ್ನಗಳು ನಡೆದಿವೆ.
ಕಳೆದ ಐದು ವರ್ಷಗಳಲ್ಲಿ ೧೪೦ಕ್ಕೂ ಹೆಚ್ಚು ಜನ ಬಿಜೆಪಿ ಕಾರ್ಯಕರ್ತರು ತೃಣಮೂಲ ಟಿಎಮ್‌ಸಿ ಹಾಗೂ ಕಾಂಗ್ರೇಸ್ ದೌರ್ಜನ್ಯಕ್ಕೆ ಬಲಿಯಾಗಿದ್ದಾರೆ. ಬಿಜೆಪಿ ಕಾರ್ಯಕರ್ತರಷ್ಟೆ ಅಲ್ಲದೇ ಮತದಾರರ ಮೇಲೆಯೂ ದಾಳಿ ನಡೆಸಲಾಗುತ್ತಿದೆ. ಟಿಎಮ್‌ಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಕಾಂಗ್ರೇಸ್ ಪಕ್ಷಗಳು ಸೇರಿಕೊಂಡು ಬಿಜೆಪಿ ಪಕ್ಷದ ಕಾರ್ಯಕರ್ತರ ಪದೆ ಪದೆ ದೌರ್ಜನ್ಯವೆಸಗುತ್ತಿರುವದು ಖಂಡನೀಯ. ಹಿಂಸಾಚಾರ ಎಸಗುವವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ ಒಡೆಯರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ಒಬಿಸಿ ಅಧ್ಯಕ್ಷ ಲಕ್ಷö್ಮಣ ಖಡಕಬಾಂವಿ, ಪವಿತ್ರಾ ಡಬ್ಬನವರ, ಭಾರತಿ ಟಿಪ್ಪುಕಡೆ, ರತ್ನಾ ಪೂಜೇರಿ, ವಿಶಾಲಾಕ್ಷಿ ಕಬನೂರ, ವೀರೆಂದ್ರ ಎಕ್ಕೇರಿಮಠ, ಇದ್ದರು.