
ಯುವ ಭಾರತ ಸುದ್ದಿ ಗೋಕಾಕ: ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರ ಏಳು ವರ್ಷಗಳನ್ನು ಪೂರೈಸಿದ ಹಿನ್ನಲೆ ಬಿಜೆಪಿ ನಗರ ಘಟಕದ ವತಿಯಿಂದ ಸೇವಾ ಹಿ ಸಂಘಟನ ನಿಮಿತ್ಯವಾಗಿ ಇಲ್ಲಿಯ ಮಿನಿ ವಿಧಾನ ಸೌಧದ ಆವರಣದಲ್ಲಿ ಸಸಿ ನೆಡುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಶಾಸಕರ ಸಹಾಯಕ ಸುರೇಶ ಸನದಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಸವರಾಜ ಹಿರೇಮಠ, ಸಚೀನ ಕಮಟೇಕರ, ಅರಣ್ಯ ಇಲಾಖೆ ಅಧಿಕಾರಿ ಹನಮಂತ ಇಂಗಳಗಿ ಸೇರಿದಂತೆ ಅನೇಕರು ಇದ್ದರು.
YuvaBharataha Latest Kannada News