ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!!
Yuva Bharatha
September 16, 2021
Uncategorized
356 Views
ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!!

ಗೋಕಾಕ: ನಗರದ ವಾರ್ಡನಂ 25 ರಲ್ಲಿ ನಗರಸಭೆಯಿಂದ ಮಂಜೂರಾದ 1.ಕೋಟಿ ರೂ ವೆಚ್ಚದಲ್ಲಿ ರಸ್ತೆ, ಚರಂಡಿ ಹಾಗೂ ಶೌಚಾಲಯ ನಿರ್ಮಾಣದ ಕಾಮಗಾರಿಗೆ ಗುರುವಾರದಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಮಾಜಿ ಅಧ್ಯಕ್ಷ ತಳದಪ್ಪ ಅಮ್ಮಣಗಿ, ಪೌರಾಯುಕ್ತ ಶಿವಾನಂದ ಹಿರೇಮಠ, ಮುಖಂಡರುಗಳಾದ ದುರ್ಗಪ್ಪ ಶಾಸ್ತಿçಗೊಲ್ಲರ, ಕಾಡಪ್ಪ ಮೇಸ್ತ್ರಿ, ಅಶೋಕ ಲಗಮಪ್ಪಗೋಳ, ಅಶೋಕ ಮೇಸ್ತ್ರಿ, ಜಾನಪ್ಪ ಕರೆಮ್ಮನವರ, ಬಸವರಾಜ ಮೇಸ್ತ್ರಿ ಹಾಗೂ ನಗರಸಭಾ ಸದಸ್ಯರು ಸೇರಿದಂತೆ ಅನೇಕರು ಇದ್ದರು.