ವಿದ್ಯಾರ್ಥಿಗಳು ಶಿಕ್ಷಣ ಪಡೆದು ಮುಂದೆ ಬರಬೇಕು- ರಮೇಶ ಜಾರಕಿಹೊಳಿ!!
ಗೋಕಾಕ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸರಕಾರದಿಂದ ಶೈಕ್ಷಣಿಕವಾಗಿ ಹಲವಾರು ಯೋಜನೆಗಳನ್ನು ಮಂಜೂರು ಮಾಡಿಸಿದ್ದು, ಅವುಗಳ ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮಾಡಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಶುಕ್ರವಾರದಂದು ತಾಲೂಕಿನ ಖನಗಾಂವ ಗ್ರಾಮದ ಪಬ್ಲಿಕ್ ಶಾಲಾ ಆವರಣದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 2ಕೋಟಿ ರೂ ವೆಚ್ಚದಲ್ಲಿ ಪಬ್ಲಿಕ್ ಶಾಲೆ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ 13 ಶಾಲಾ ಕೊಠಡಿ, ಗ್ರಂಥಾಲಯ, ಪ್ರಯೋಗಾಲಯ, ಗಣಕಯಂತ್ರ ಕೊಠಡಿ ಹಾಗೂ ಹೈಟೆಕ್ ಶೌಚಾಲಯಗಳ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭೂಮಿ ಪೂಜೆ ನೆರವೇರಿಸಿ ಅವರು ಮತನಾಡುತ್ತಾ ಈ ಬಾಗದ ಬಡ ವಿದ್ಯಾರ್ಥಿಗಳು ಶಿಕ್ಷಣ ಪಡೆದು ಮುಂದೆ ಬರಬೇಕು, ಬೆಳೆಯುತ್ತಿರುವ ತಂತ್ರಜ್ಞಾನದ ಸರಿಯಾದ ಬಳಕೆಯಿಂದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಸಾದಿಸಬೇಕು. ಇದಕ್ಕೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡಲು ಸಿದ್ದವಿರುವುದಾಗಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.
ಇದೇ ಸಂದರ್ಭದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಸಮಸ್ತ ಗ್ರಾಮಸ್ಥರ ಪರವಾಗಿ ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯರಾದ ಟಿ.ಆರ್.ಕಾಗಲ, ಮಡೆಪ್ಪ ತೋಳಿನವರ, ಗುತ್ತಿಗೆದಾರರಾದ ಬಸವರಾಜ ದಾಸನವರ, ಪ್ರಕಾಶ ಬಿ ಪೊಲೀಸ ಗೌಡರ, ಲೋಕೋಪಯೋಗಿ ಕಾರ್ಯನಿರ್ವಾಹಕ ಅಧಿಕಾರಿ ಅನಿಲಕುಮಾರ ಶಿಂಗೆ, ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಕೆ.ಪಿ.ನಾಗಾಭರಣ, ಮುಖಂಡರುಗಳಾದ ಬಸಪ್ಪ ಅಮ್ಮಿನಿ, ಶ್ರೀಗೌಡ ಪಾಟೀಲ, ರಾಜು ತಡಸಳೂರ,ಶಿಕ್ಷಣ ಇಲಾಖೆಯ ಬಿಇಒ ಜಿ.ಬಿ.ಬಳಗಾರ, ಗೋಪಾಲ ಮಾಳಗಿ, ಎಂ.ಬಿ.ಪಾಟೀಲ ಇದ್ದರು.