ನ್ಯಾಯಾಲಯದ ತೀರ್ಪು ಸ್ವಾಗತಾರ್ಹ.!
ಗೋಕಾಕ: ಕರ್ನಾಟಕ ಉಚ್ಚ ನ್ಯಾಯಲಯ ಹಿಜಾಬ್ ಕುರಿತು ನೀಡಿರುವ ತೀರ್ಪು ಸ್ವಾಗತಾರ್ಹ. ಹಿಜಾಬ್ ಸಮವಸ್ತ್ರದ ಭಾಗವಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಈ ತೀರ್ಪು ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದೆ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆಬಾಗಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಹಿಜಾಬ್ ಧರಿಸಬೇಕು ಎಂದು ಶಾಲೆಯಿಂದ ದೂರವುಳಿದಿರುವ ವಿದ್ಯಾರ್ಥಿನಿಯರು ಕೂಡಲೆ ಶಾಲೆಗೆ ತೆರಳಬೇಕು ಎಂದು ಕೋರುತ್ತೇನೆ. ಈ ತೀರ್ಪನ್ನು ಕಾರ್ಯಕರ್ತರು ಸಮಚಿತ್ತದಿಂದ ಸ್ವಿಕರಿಸಿ, ಯಾವುದೇ ಅನಗತ್ಯ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ರಮೇಶ ಜಾರಕಿಹೊಳಿ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.