Breaking News

ರಮೇಶ್ ಜಾರಕಿಹೊಳಿ ಮುಂಬೈನಲ್ಲಿ ಠಿಕಾಣಿ!!

Spread the love

ರಮೇಶ್ ಜಾರಕಿಹೊಳಿ ಮುಂಬೈನಲ್ಲಿ ಠಿಕಾಣಿ!!

 

ಗೋಕಾಕ: ಕ್ಷೀಪ್ರ ರಾಜಕೀಯ ಕ್ರಾಂತಿ ಮೂಲಕ ಮಹಾರಾಷ್ಟ್ರ ಮತ್ತೊಮ್ಮೆ ಸುದ್ದಿಯಲ್ಲಿದೆ. ಮೂರು ಪಕ್ಷಗಳನ್ನು ಒಳಗೊಂಡ ಮೈತ್ರಿ ಸರ್ಕಾರವೀಗ ಪತನದ ಅಂಚಿನಲ್ಲಿದೆ. ೪೦ಕ್ಕೂ ಅಧಿಕ ಶಾಸಕರು ಮಹಾವಿಕಾಸ ಅಘಾಡಿ ವಿರುದ್ಧ ಬಂಡೆದಿದ್ದಾರೆ. ಇಂಥ ಸಮಯದಲ್ಲೇ ರಮೇಶ್ ಜಾರಕಿಹೊಳಿ ಮುಂಬೈನಲ್ಲಿ ಠಿಕಾಣಿ ಹೂಡಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಸದ್ಯ ಶಾಸಕ ರಮೇಶ್ ಜಾರಕಿಹೊಳಿ ಅವರು ಮುಂಬೈ ಪ್ರವಾಸದಲ್ಲಿದ್ದು, ರಾಜಕೀಯ ಗುರುವಿನ ಋಣ ತೀರಿಸಲು ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆಯೇ ಎಂಬ ಕುತೂಹಲಕ್ಕೆ ಕಾರಣವಾಗಿದೆ. ಕೆರಳಿಸಿದ ಆಪರೇಶನ್ ಕಮಲ ಕಾರ್ಯಾಚರಣೆರಲ್ಲಿ ಭಾಗಿಯಾಗಿದ್ದಾರಾ ರಮೇಶ್ ಎಂಬ ಅನುಮಾನಗಳು ಮೂಡಿದೆ.
ಕರ್ನಾಟಕ ಮಾದರಿಯಲ್ಲೇ ಮಹಾರಾಷ್ಟ್ರದಲ್ಲೂ ರಾಜಕೀಯ ಕ್ಷೀಪ್ರಕ್ರಾಂತಿಯಾಗಿದೆ. ಕರ್ನಾಟಕದ ೨೦೧೮ರ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿತ್ತು. ಅತಿದೊಡ್ಡ ಪಕ್ಷವಾಗಿ ಅಂದು ಬಿಜೆಪಿ ಹೊರಹೊಮ್ಮಿತ್ತು. ಆಗ ಬಿಎಸ್‌ವೈ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಬಹುಮತ ಸಾಬೀತು ಬಿಎಸ್‌ವೈಗೆ ಸಾಧ್ಯವಾಗಲಿಲ್ಲ. ಪರಿಣಾಮ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಎಚ್‌ಡಿ ಕುಮಾರಸ್ವಾಮಿ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಆಗಿದ್ದರು. ೧೪ ತಿಂಗಳು ಆಗುತ್ತಿದ್ದಂತೆ ಮೈತ್ರಿ ಸರ್ಕಾರದ ವಿರುದ್ಧ ೧೭ ಶಾಸಕರು ಬಂಡಾಯ ಎದ್ದಿದ್ದರು. ಎಚ್.ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪತನಕ್ಕೆ ಮುನ್ನುಡಿ ಬರೆದವರಲ್ಲಿ ರಮೇಶ್ ಜಾರಕಿಹೊಳಿ ಮೊದಲಿಗರು. ಕರ್ನಾಟಕದ ಮಾದರಿಯಲ್ಲಿ ಮಹಾರಾಷ್ಟ್ರದಲ್ಲಿ ಈಗ ರಾಜಕೀಯ ಬೆಳವಣಿಗೆ ನಡೆಯುತ್ತಿವೆ. ಈ ವೇಳೆಯೇ ಕಳೆದ ನಾಲ್ಕು ದಿನಗಳಿಂದ ರಮೇಶ್ ಜಾರಕಿಹೊಳಿ ಮುಂಬೈನಲ್ಲಿ ಠಿಕಾಣಿ ಹೂಡಿರುವುದು ಕುತೂಹಲ ಮೂಡಿಸಿದೆ.
ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾದ ೧೭ ಶಾಸಕರಿಗೆ ಬಿಜೆಪಿ ನೇತ್ರತ್ವದ ಮಹಾರಾಷ್ಟç ಸರಕಾರ ಆಶ್ರಯ ನೀಡಿತ್ತು. ಮಹಾರಾಷ್ಟ್ರ ಸಿಎಂ ಆಗಿದ್ದ ದೇವೇಂದ್ರ ಫಡ್ನವಿಸ್ ತಿಂಗಳ ಕಾಲ ೧೭ಶಾಸಕರಿಗೆ ವೈಭವದ ಆಶ್ರಯ ನೀಡಿದ್ದರು. ಆಗಲೇ ರಮೇಶ್ ಜಾರಕಿಹೊಳಿ ಹಾಗೂ ದೇವೇಂದ್ರ ಫಡ್ನವಿಸ್ ಅವರ ನಡುವಿನ ಸ್ನೇಹ ದಿನಕಳೆದಂತೆ ವೃದ್ಧಿಯಾಗಿದೆ. ಆಗಾಗ ರಮೇಶ್ ಜಾರಕಿಹೊಳಿ ಅವರು ಮುಂಬೈ ಪ್ರವಾಸ ಕೈಗೊಂಡು ಫಡ್ನವಿಸ್ ಅವರನ್ನು ಭೇಟಿ ಆಗುತ್ತಲೇ ಇರುತ್ತಾರೆ. ಫಡ್ನವಿಸ್ ನನ್ನ ರಾಜಕೀಯ ಗುರು ಎಂದು ರಮೇಶ್ ಜಾರಕಿಹೊಳಿ ಅವರು ಹಲವು ಸಲ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾಗ ಬಿಜೆಪಿ ಬಹುತೇಕ ನಾಯಕರು ರಮೇಶ್ ಜಾರಕಿಹೊಳಿ ಅವರಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ ಫಡ್ನವಿಸ್‌ರವರು ಮಾತ್ರ ರಮೇಶ್ ಜಾರಕಿಹೊಳಿ ಅವರ ಬೆನ್ನಿಗೆ ನಿಂತಿದ್ದರು ಇದು ಇಬ್ಬರ ನಡುವಿನ ಬಾಂಧವ್ಯಕ್ಕೆ ಸಾಕ್ಷಿ. ಈಗ ಮಹಾವಿಕಾಸ ಅಘಾಡಿ ವಿರುದ್ಧ ೪೦ ಶಾಸಕರು ಬಂಡೆದ್ದು ರೆಸಾರ್ಟ್ ಸೇರಿದ್ದಾರೆ. ಬಿಜೆಪಿ ಸರ್ಕಾರ ರಚನೆಗೆ ತಾಲೀಮು ಚುರುಕುಗೊಂಡಿದ್ದು, ಫಡ್ನವಿಸ್‌ಗೆ ರಮೇಶ್ ಸಹಕಾರ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ.
ಮಹಾ ವಿಕಾಸ ಅಘಾಡಿ ಸರ್ಕಾರದಲ್ಲಿ ಎರಡನೇ ದಿನವೂ ಹೈಡ್ರಾಮಾ ಮುಂದುವರೆದಿದೆ. ಇತ್ತ ಬಿಜೆಪಿ ಕೂಡ ಸರ್ಕಾರ ರಚನೆಗೆ ಕಸರತ್ತು ಆರಂಭಿಸಿದ್ದಾರೆ. ಇದೀಗ ರಮೇಶ್ ಜಾರಕಿಹೊಳಿ ಪ್ರವಾಸವೂ ಕುತೂಹಲ ಕೆರಳಿಸಿದೆ. ಇಂಥ ಸಮಯದಲ್ಲಿ ಫಡ್ನವಿಸ್ ಬೆನ್ನಿಗೆ ನಿಲ್ಲುವ ಮೂಲಕ ರಮೇಶ್ ಗುರುವಿನ ಋಣ ತೀರುಸುತ್ತಿದ್ದಾರಾ? ಹೀಗಂತ ಗುಸುಗುಸು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.


Spread the love

About Yuva Bharatha

Check Also

ಬೋರಗಾಂವ ಪಟ್ಟಣದ ಶ್ರೀ ಅರಿಹಂತ ಕೋ,ಆಪ್ ಸೌಹಾರ್ಧ ಸಹಕಾರಿ ಬ್ಯಾಂಕ ವಿರುದ್ಧ ರೈತರ ಪ್ರತಿಭಟನೆ ಬ್ಯಾಂಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಕೆ.!

Spread the loveಬೋರಗಾಂವ ಪಟ್ಟಣದ ಶ್ರೀ ಅರಿಹಂತ ಕೋ,ಆಪ್ ಸೌಹಾರ್ಧ ಸಹಕಾರಿ ಬ್ಯಾಂಕ ವಿರುದ್ಧ ರೈತರ ಪ್ರತಿಭಟನೆ ಬ್ಯಾಂಕ ವ್ಯವಸ್ಥಾಪಕರಿಗೆ …

Leave a Reply

Your email address will not be published. Required fields are marked *

eighteen − 2 =