Breaking News

ಡಾ. ಶ್ಯಾಮ ಪ್ರಸಾದ ಮುಖರ್ಜಿ ಶ್ರೇಷ್ಠ ರಾಜನೀತಿ ತಜ್ಞರಾಗಿದ್ದರು.- ಲಕ್ಷ್ಮಣ ತಪಸಿ.!

Spread the love

ಡಾ. ಶ್ಯಾಮ ಪ್ರಸಾದ ಮುಖರ್ಜಿ ಶ್ರೇಷ್ಠ ರಾಜನೀತಿ ತಜ್ಞರಾಗಿದ್ದರು.- ಲಕ್ಷ್ಮಣ ತಪಸಿ.!


ಗೋಕಾಕ: ದಿಟ್ಟತನದಿಂದ ಹೋರಾಟ ನಡೆಸುತ್ತಿದ್ದ ಡಾ. ಶ್ಯಾಮ ಪ್ರಸಾದ ಮುಖರ್ಜಿ ಶ್ರೇಷ್ಠ ರಾಜನೀತಿ ತಜ್ಞರಾಗಿದ್ದರು. ಯುವಕರು ಇಂತಹ ಮಹಾನ ನಾಯಕರ ತತ್ವಾದರ್ಶಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕೆಂದು ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಸ್ ಲಕ್ಷ್ಮಣ ತಪಸಿ ಹೇಳಿದರು.
ಅವರು, ನಗರದ ಶಾಸಕರ ಕಾರ್ಯಾಲಯದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳಿಂದ ಹಮ್ಮಿಕೊಂಡ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಶ್ಯಾಮ ಪ್ರಸಾದ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಭಾರತದ ಏಕತೆ, ಸಾರ್ವಭೌಮತ್ವ ಹಾಗೂ ಅಖಂಡತೆಗಾಗಿ ಹೋರಾಟ ಮಾಡಿದ ಧೀಮಂತ ನಾಯಕ ಡಾ. ಶ್ಯಾಮ ಪ್ರಸಾದ ಮುಖರ್ಜಿ ತಮ್ಮ ತತ್ವ ಸಿದ್ಧಾಂತಗಳಿಗಾಗಿ ಕೊನೆಯೂಸಿರಿನವರೆಗೆ ಹೋರಾಟ ನಡೆಸಿದ್ದರು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಸವರಾಜ ಹಿರೇಮಠ, ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ ಒಡೆಯರ, ಯುವ ಮೋರ್ಚಾ ಅಧ್ಯಕ್ಷರಾದ ಮಂಜುನಾಥ ಪ್ರಭುನಟ್ಟಿ, ಆನಂದ ಅತ್ತುಗೋಳ, ಪ್ರಧಾನ ಕಾರ್ಯದರ್ಶಿಗಳಾದ ರಮೇಶ ಭಂಡಿ, ವಿರೇಂದ್ರ ಎಕ್ಕೇರಿಮಠ, ಅಲ್ಪಸಂಖ್ಯಾತ ಮೋರ್ಚಾಧ್ಯಕ್ಷ ಮಲ್ಲಿಕಜಾನ ತಳವಾರ, ಹಿಂದುಳಿದ ವರ್ಗದ ಮೋರ್ಚಾಧ್ಯಕ್ಷ ಲಕ್ಷö್ಮಣ ಖಡಕಭಾಂವಿ, ಲಕ್ಷö್ಮಣ ತಳ್ಳಿ, ಕಿರಣ ಡಮಾಮಗರ, ನಗರಸಭೆ ಸದಸ್ಯರು, ಗಣ್ಯರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಬೆಳಗಾವಿಯಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮ ಕಂಡು ಕಾಂಗ್ರೇಸ್‌ಗೆ ನಡುಕ.!

Spread the loveಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಗೋಕಾಕ ಮತಕ್ಷೇತ್ರದಲ್ಲಿ ಮತಯಾಚನೆ.! ಗೋಕಾಕ: ಬೆಳಗಾವಿಯಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ …

Leave a Reply

Your email address will not be published. Required fields are marked *

13 − nine =