Breaking News

ಗೋಕಾಕನಲ್ಲಿ ಕೈಗಾರಿಕಾ ಪ್ರದೇಶ ಅತಿ ಶೀಘ್ರದಲ್ಲಿ-ರಮೇಶ ಜಾರಕಿಹೊಳಿ.!

Spread the love

ಗೋಕಾಕನಲ್ಲಿ ಕೈಗಾರಿಕಾ ಪ್ರದೇಶ ಅತಿ ಶೀಘ್ರದಲ್ಲಿ-ರಮೇಶ ಜಾರಕಿಹೊಳಿ.!

ಯುವ ಭಾರತ ಸುದ್ದಿ  ಗೋಕಾಕ: ಗೋಕಾಕ ಜನತೆಯ ಬಹುದಿನಗಳ ಕನಸು ಈಗ ಇಡೇರುವ ಹಂತಕ್ಕೆ ಬಂದಿದ್ದು ಸಾವಿರಾರು ಜನರಿಗೆ ಉದ್ಯೋಗ ಕಲ್ಪಿಸಲು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು, ಕೈಗಾರಿಕಾ ಪ್ರದೇಶ ನಿರ್ಮಾಣ ಮಾಡಲು ನಿರ್ಧರಿಸಿದ್ದಾರೆ. ಈ ಹಿನ್ನಲೆಯಲ್ಲಿ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಸಾವಿರಾರು ಜನರಿಗೆ ಉದ್ಯೋಗ ಕಲ್ಪಿಸಲು ಗುರಿಯಿಟ್ಟುಕೊಂಡಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಈಗ ಕೈಗಾರಿಕಾ ಪ್ರದೇಶ ಗುರುತಿಸಿ ಅದಕ್ಕೆ ಕಾಯಕಲ್ಪ ನೀಡಲು ಮುಂದಾಗಿದ್ದಾರೆ.

ಕೈಗಾರಿಕಾ ಪ್ರದೇಶ ನಿರ್ಮಾಣಗೊಂಡಲ್ಲಿ ಗೋಕಾಕ ಜನತೆಗೆ ಉದ್ಯೋಗ, ನೌಕರಿ ಸುಲಭವಾಗಿ ಸಿಗಲಿವೆ. ೪೦೦ಎಕರೆ ಪ್ರದೇಶವನ್ನು ಕೈಗಾರಿಕಾ ವಲಯವನ್ನಾಗಿ ಮಾರ್ಪಡಿಸಿ, ಬೃಹತ್ ಮಧ್ಯಮ ಹಾಗೂ ಸಣ್ಣ ಕೈಗಾರಿಕಾ ಕಂಪಣಿಗಳನ್ನು ಸ್ಥಾಪಿಸಲು ಉದ್ದೇಶ ಹೊಂದಿದ್ದಾರೆ.
ತಾಲೂಕಿನ ಶಿವಾಪೂರ ಗ್ರಾಮದ ಮರಡಿಸಿದ್ದಪ್ಪ ದೇವಸ್ಥಾನದ ಹತ್ತಿರ ಶುಕ್ರವಾರದಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೇರಿದಂತೆ ಕೈಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಕೈಗಾರಿಕಾ ವಲಯ ಸ್ಥಾಪನೆಗೆ ಸೂಕ್ತ ಜಾಗ ಗುರುತಿಸಿದರು. ಬಹುತೇಕ ವಲಯ ನಿರ್ಮಾಣಕ್ಕೆ ಹಸಿರು ನಿಶಾನೆ ಸಿಕ್ಕಿದ್ದು, ಇನ್ನು ಕೇಲವೆ ದಿನಗಳಲ್ಲಿ ಇದು ಕಾರ್ಯಾರಂಭಗೊಳ್ಳಲಿದೆ.
ಈ ಬಗ್ಗೆ ಪತ್ರಕರ್ತರೊಂದಿಗೆ ಮಾತನಾಡಿದ ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಜನತೆ ಹಲವು ವರ್ಷಗಳ ಬೇಡಿಕೆಯನ್ನು ಇಡೇರಿಸಲು ಹಾಗೂ ಜನರಿಗೆ ಸುಲಭವಾಗಿ ಉದ್ಯೋಗ ನೌಕರಿ ಒದಗಿಸಲು ಕೈಗಾರಿಕಾ ಪ್ರದೇಶ ನಿರ್ಮಾಣಗೊಳ್ಳುತ್ತಿದೆ. ಈ ಪ್ರದೇಶದಲ್ಲಿ ನೂರಾರು ಕಂಪಣಿಗಳು ಕಾರ್ಖಾನೆಗಳನ್ನು ಆರಂಭಿಸಲಿವೆ. ಜೊತೆಗೆ ಉದ್ಯಮಿದಾರರಿಗೂ ಕಾರ್ಖಾನೆ ನಿರ್ಮಿಸಲು ಅನುಕೂಲಕರ ವಾತಾವರಣ ಸೃಷ್ಟಿಯಾಗಲಿದೆ ಎಂದು ಹೇಳಿದರು.
ಈ ಕೈಗಾರಿಕಾ ವಲಯ ಸ್ಥಾಪನೆಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ವಲಯ ನಿರ್ಮಾಣಕ್ಕೆ ಬೇಕಾಗುವ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವದು. ಕಾರ್ಖಾನೆಗಳನ್ನು ಆರಂಭಿಸುವ ಉದ್ಯಮಿದಾರರಿಗೆ ಯಾವುದೇ ಅಡಚನೆ ಆಗದಂತೆ ಎಲ್ಲ ಸೌಕರ್ಯಗಳನ್ನು ಕಲ್ಪಿಸಲಾಗುವದು.
ಕೊಣ್ಣೂರ ಗ್ರಾಮೀಣ, ಸಾವಳಗಿ, ಶಿವಾಪೂರ, ಖಾನಾಪುರ, ನಂದಗಾಂವ ಸೇರಿ ವಿವಿಧ ಹಳ್ಳಿಗಳ ಜನರಿಗೂ ಇದರ ಲಾಭ ಸೀಗಲಿದೆ. ಉದ್ಯೋಗ ಹುಡುಕಿಕೊಂಡು ಬೇರೆ ನಗರಗಳಿಗೆ ವಲಸೆ ಹೋಗುವ ಬದಲು ಸ್ಥಳೀಯವಾಗಿ ಉದ್ಯೋಗ ಕಲ್ಪಿಸುವ ಮಹತ್ವಾಕಾಂಕ್ಷೆ ಯೋಜನೆ ಇದಾಗಿದೆ. ಮುಖ್ಯವಾಗಿ ಗೋಕಾಕ ನಗರ ಮತ್ತು ಗ್ರಾಮೀಣ ಭಾಗದ ಜನರಿಗೆ ಮೊದಲ ಆದ್ಯತೆ ನೀಡಲಾಗುವದು ಶೀಘ್ರದಲ್ಲಿಯೇ ಈ ಕೈಗಾರಿಕಾ ಪ್ರದೇಶ ನಿರ್ಮಾಣಗೊಳ್ಳಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಕೊಣ್ಣೂರ ಪುರ ಸಭೆ ಮುಖ್ಯಾಧಿಕಾರಿ ಶಿವಾನಂದ ಹಿರೇಮಠ, ಕೈಗಾರಿಕಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಅಕ್ಕಾ ಅಂದ್ರೆ ಅವರೇ ಅಂತ ಯಾಕೆ ತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್-ಮಾಜಿ ಶಾಸಕ ಸಂಜಯ ಪಾಟೀಲ.!

Spread the loveನಾನು ಭಾಷಣದಲ್ಲಿ ಹೆಬ್ಬಾಳಕರ ಹೆಸರನ್ನೆ ತಗೊಂಡಿಲ್ಲ. -ಮಾಜಿ ಶಾಸಕ ಸಂಜಯ ಪಾಟೀಲ.! ಯುವಭಾರತ ಸುದ್ದಿ ಬೆಳಗಾವಿ: ನಾನು …

Leave a Reply

Your email address will not be published. Required fields are marked *

5 × 4 =