ಶ್ವಾನಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ.!

ಗೋಕಾಕ: ನಗರದ ಪಶು ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾದ ಶ್ವಾನಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮಕ್ಕೆ ಗುರುವಾರದಂದು ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ ಚಾಲನೆ ನೀಡಿದರು.
ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ ಕಮತ ಮಾತನಾಡಿ, ರೇಬೀಸ್ ರೋಗ ಪ್ರಾಣಿ ಜನ್ಯರೋಗವಾಗಿದ್ದು, ಜಾನುವಾರುಗಳಿಂದ ಮಾನವರಿಗೆ ಹರಡುವ ರೋಗವಾಗಿದೆ. ಇದಕ್ಕೆ ಚಿಕಿತ್ಸೆ ಇರುವದಿಲ್ಲ. ಕಾರಣ ರೋಗ ನಿಯಂತ್ರಣಕ್ಕಾಗಿ ಎಲ್ಲರು ತಮ್ಮ ಶ್ವಾನಗಳಿಗೆ ಲಸಿಕೆ ಹಾಕಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಪೌರಾಯುಕ್ತ ಶಿವಾನಂದ ಹಿರೇಮಠ, ಡಾ. ಶಶಿಕಾಂತ ಕೌಜಲಗಿ ಹಾಗೂ ಸಿಬ್ಬಂಧಿಗಳು ಇದ್ದರು.
YuvaBharataha Latest Kannada News