Breaking News

ವಿದ್ಯಾರ್ಥಿಗಳು ಪಠ್ಯದಷ್ಠೇ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

Spread the love

ವಿದ್ಯಾರ್ಥಿಗಳು ಪಠ್ಯದಷ್ಠೇ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ಗೋಕಾಕ: ಕ್ಷೇತ್ರದ ಶೈಕ್ಷಣಿಕ ಪ್ರಗತಿಗಾಗಿ ಶಾಸಕರಾದ ರಮೇಶ ಜಾರಕಿಹೊಳಿ ಅವರು ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದು ಇವುಗಳ ಸದುಪಯೋಗದಿಂದ ವಿದ್ಯಾರ್ಥಿಗಳು ಪ್ರತಿಭಾನ್ವಿತರಾಗಿ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳುವದರೊಂದಿಗೆ ತಾಲೂಕಿನ ಕೀರ್ತಿಯನ್ನು ಹೆಚ್ಚಿಸುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು.
ಅವರು, ಗೋಕಾಕ ಮತಕ್ಷೇತ್ರದ ಖನಗಾಂವ ಗ್ರಾಮದಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯ ಅಂದಾಜು ೨೦ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಲಾದ ವ್ಹಾಲಿ ಬಾಲ್, ಬಾಸ್ಕೇಟ್ ಬಾಲ ಮತ್ತು ಖೋ ಖೋ ಆಟಗಳ ಆಟದ ಮೈದಾನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ವಿದ್ಯಾರ್ಥಿಗಳು ಪಠ್ಯದಷ್ಠೇ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿ, ಕ್ರೀಡೆಗಳಿಂದ ಆರೋಗ್ಯ ಸದೃಢವಾಗಿ ಹೆಚ್ಚಿನ ಸಾಧನೆ ಮಾಡಲು ಸಹಕಾರಿಯಾಗುತ್ತದೆ. ಕ್ರೀಡಾ ಕ್ಷೇತ್ರದಲ್ಲೂ ಹೆಚ್ಚಿನ ಉದ್ಯೋಗ ಅವಕಾಶಗಳಿದ್ದು, ಕ್ರೀಡೆಗಳಿಗೂ ಹೆಚ್ಚಿನ ಮಹತ್ವ ನೀಡುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಎಮ್ ಎಲ್ ತೋಳಿನವರ, ಸಿದ್ಧಗೌಡ ಪಾಟೀಲ, ಅಪ್ಪಯ್ಯಪ್ಪ ಹಮ್ಮಿನಿ, ಪುಂಡಲೀಕ ವಣ್ಣೂರ, ವೀಮಲವ್ವ ಬಡಿಗೇರ, ಸಂತೋಷ ನಾಯ್ಕ, ಶಂಕರ ನಾಯ್ಕ ಸೇರಿದಂತೆ ಶಾಲೆಯ ಸಿಬ್ಬಂಧಿ ವರ್ಗದವರು, ಗ್ರಾಮದ ಹಿರಿಯರು ಇದ್ದರು.
ಇದೇ ಸಂದರ್ಭದಲ್ಲಿ ೪೮ ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ಮಾರುಕಟ್ಟೆ ಹಾಗೂ ೫೦ಲಕ್ಷ ವೆಚ್ಚದಲ್ಲಿ ಕನ್ನಮ್ಮದೇವಿ ದೇವಸ್ಥಾನದ ಆವರಣದಲ್ಲಿ ನಿರ್ಮಿಸಲಾದ ಯಾತ್ರಿ ನಿವಾಸವನ್ನು ಉದ್ಘಾಟಿಸಿದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

seven − 2 =