ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ ಸರಕಾರಕ್ಕೆ ಮನವಿ.!

ಗೋಕಾಕ: ಎಬಿವಿಪಿ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಿಂದ ತಹಶೀಲದಾರ ಕಚೇರಿ ವರೆಗೆ ಪ್ರತಿಭಟನಾ ಮೇರವಣಿಗೆ ಮೂಲಕ ತಮ್ಮ ವಿವಿಧ ಬೇಡಿಕೆಗಳನ್ನು ಇಡೇರಿಸಸುವಂತೆ ಆಗ್ರಹಿಸಿ ತಹಶೀಲದಾರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
೨೦೨೧-೨೨ ಸಾಲಿನ ಶೈಕ್ಷಣಿಕ ವರ್ಷದ ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡುವಂತೆ ಹಾಗೂ ಯ್ಯೂಯ್ಯೂಸಿಎಮ್‌ಎಸ್ ತಂತ್ರಾAಶವನ್ನು ಸರಿಪಡಿಸಿ ಫಲಿತಾಂಶವನ್ನು ಪ್ರಕಟಸಿವಂತೆ ಹಾಗೂ ಇನ್ನಿತರ ಬೇಡಿಕೆಗಳನ್ನು ಇಡೇರಿಸುವಂತೆ ಆಗ್ರಹಿಸಲಾಯಿತು.
ತಾಲೂಕ ಸಂಚಾಲಕರಾದ ಸಂಜು ಹತ್ತಿಕಟಗಿ, ಸಾಗರ ಹಿರೇಮಠ, ಪ್ರಶಾಂತ ಕೋರಿ ಸೇರಿದಂತೆ ನೂರಾರು ಎಬಿವಿಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
YuvaBharataha Latest Kannada News