Breaking News

ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹೋರಾಟದಿಂದಲೇ ಮೀಸಲಾತಿ ಭಾಗ್ಯ: ಲಖನ್ ಜಾರಕಿಹೊಳಿ

Spread the love

ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹೋರಾಟದಿಂದಲೇ ಮೀಸಲಾತಿ ಭಾಗ್ಯ: ಲಖನ್

ಗೋಕಾಕದಲ್ಲಿ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ ಕಾರ್ಯಕ್ರಮ


ಗೋಕಾಕ: ರಾಜನಹಳ್ಳಿಯ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮಿಜಿಯವರ ನಿರಂತರ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ವಾಲ್ಮೀಕಿ ನಾಯಕ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ಹೆಚ್ಚಿಸಿತು ಎಂದು ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು.
ನಗರದ ಮಹಾಲಕ್ಷಿö್ಮÃ ಸಭಾ ಭವನದಲ್ಲಿ ೨೦೨೩ರ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಮಾತನಾಡಿ, ಶ್ರೀಗಳ ಹೋರಾಟದಿಂದ ಎಸ್‌ಟಿ ಸಮುದಾಯಕ್ಕಷ್ಟೇ ಅಲ್ಲದೆ ಎಸ್‌ಸಿ ಸಮುದಾಯಕ್ಕೂ ಮೀಸಲಾತಿ ಹೆಚ್ಚಿಸುವಂತೆ ಮಾಡಿದರು. ಎಸ್‌ಸಿ ಎಸ್‌ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಸಹಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರನ್ನು ಲಖನ್ ಅಭಿನಂಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜನಹಳ್ಳಿಯ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮಿಜಿ ಮಾತನಾಡಿ, ನಮ್ಮ ಹಕ್ಕುಗಳಿಗೆ ನಡೆಸಿದ ಹೋರಾಟಕ್ಕೆ ಎಲ್ಲ ಸಮುದಾಯದ ಸ್ವಾಮೀಜಿಗಳು ಹಾಗೂ ಮುಖಂಡರು ಬೆಂಬಲಿಸಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ನಮ್ಮ ಹೋರಾಟ ಕಂಡು ಮೀಸಲಾತಿ ಹೆಚ್ಚಿಸುವ ಭರವಸೆ ನೀಡಿದ್ದರೂ ಹೋರಾಟ ಕೈಬಿಡಲಿಲ್ಲ. ನಂತರ ಸರ್ವಪಕ್ಷಗಳ ಸಭೆ ನಡೆಸಿದ ಬೊಮ್ಮಾಯಿಯವರು ಮೀಸಲಾತಿಯನ್ನು ಹೆಚ್ಚಿಸಿ ನಮ್ಮ ಸಮುದಾಯಗಳ ಅಭಿವೃದ್ಧಿಗೆ ಬೆಂಬಲವಾಗಿ ನಿಂತಿದ್ದಾರೆ ಎಂದರು.
ಡಾ.ಬಾಬಾಸಾಹೇಬ ಅಂಬೇಡ್ಕರ ಅವರ ಆಶಯದಂತೆ ಜಾರಕಿಹೊಳಿ ಸಹೋದರರು ಸರ್ವ ಜನಾಂಗದವರನ್ನು ಒಗ್ಗೂಡಿಸಿ ಗೋಕಾಕನ್ನು ಶಾಂತಿಯ ತೋಟವನ್ನಾಗಿಸಿದ್ದಾರೆ. ಈ ಸಭೆಯಲ್ಲಿ ಎಲ್ಲ ಸಮುದಾಯಗಳ ನಾಯಕರುಗಳು ಭಾಗವಹಿಸಿದ್ದು ನಮ್ಮ ಸಮುದಾಯದ ಶಕ್ತಿಯನ್ನು ಮತ್ತಷ್ಟು ಬಲಿಷ್ಠಗೊಳಿಸಿದೆ ಎಂದರು.


ಬಸವಣ್ಣನವರು ಜಾತಿ ಪದ್ಧತಿ ನಿರ್ಮೂಲನೆಯಾಗಿ ಎಲ್ಲರೂ ಸಾಮರಸ್ಯದಿಂದ ಬದುಕು ಸಾಗಿಸಬೇಕೆಂದಿದ್ದರು ಅವರಿಗೂ ಕಷ್ಟ ತಪ್ಪಲಿಲ್ಲ. ಹಾಗೇಯೆ ಈಗಲೂ ಈ ಅನಿಷ್ಠ ಪದ್ಧತಿ ಮುಂದುವರೆಯುತ್ತ ಬಂದಿದೆ. ಎಲ್ಲ ಸಮುದಾಯಗಳನ್ನು ಒಟ್ಟಾಗಿ ಕರೆದುಕೊಂಡು ಹೋಗುತ್ತಿರುವ ಜಾರಕಿಹೊಳಿ ಸಹೋದರರ ಕಾರ್ಯ ಶ್ಲಾಘನೀಯ. ಅದರಲ್ಲೂ ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಮತಕ್ಷೇತ್ರವನ್ನು ಮಾದರಿಯಾಗಿಸಿ ಜನಮನ್ನಣೆಗಳಿಸಿದ್ದಾರೆ ಎಂದು ಹೊಗಳಿದರು.
೨೦೨೩ ಫೆಬ್ರುವರಿ ೮ ಮತ್ತು ೯ರಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದ್ದು, ಎಲ್ಲ ಸಮಾಜ ಭಾಂಧವರು ಈ ಜಾತ್ರಾ ಮಹೋತ್ಸವಕ್ಕೆ ಆಗಮಿಸುವಂತೆ ಶ್ರೀಗಳು ಆಮಂತ್ರಿಸಿ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಎಲ್‌ಇಟಿ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ ಮಾತನಾಡಿ, ನಮ್ಮ ದೊಡ್ಡಪ್ಪ ರಮೇಶ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡಿದರು. ಹೀಗಾಗಿ ನಮಗೆ ಮೀಸಲಾತಿ ಹೆಚ್ಚಳವಾಗಲು ವಿಳಂಬವಾಯಿತು. ರಮೇಶ ಅವರು ಅಧಿಕಾರದಲ್ಲಿ ಇದ್ದಿದ್ದರೆ ಆಗಲೇ ಮೀಸಲಾತಿ ಹೆಚ್ಚಳ ಮಾಡಿ ಸಮಾಜಕ್ಕೆ ನ್ಯಾಯ ಒದಗಿಸಿ ಕೊಡುತ್ತಿದ್ದರು. . ನಾವು ಯಾವತ್ತೂ ಜಾತಿ ಜಾತಿಗಳ ನಡುವೆ ಬೆಂಕಿ ಹಚ್ಚುವ ಕೇಲಸ ಮಾಡಿಲ್ಲ. ಈ ಹಿಂದೆಯೂ ನಮ್ಮ ಕುಟುಂಬದ ವಿರುದ್ಧ ಅನೇಕ ಷಡ್ಯಂತ್ರಗಳು ನಡೆದಿವೆ. ಆದರೆ ಜನರು ನಮ್ಮ ಬೆಂಬಲಕ್ಕೆ ನಿಂತಿದ್ದು, ಇವರ ಆಶೀರ್ವಾದವೇ ನಮಗೆ ಶ್ರೀರಕ್ಷೆ ಆಗಿದೆ ಎಂದರು.
ನಮ್ಮ ಸಮುದಾಯಕ್ಕೆ ಹಲವಾರು ವರ್ಷಗಳಿಂದ ನಮ್ಮ ಕುಟುಂಬ ಜನಸೇವೆ ಮಾಡುತ್ತ ಬಂದಿದೆ. ಕೆಲವರು ನಮ್ಮ ಕುಟುಂಬದ ವಿರುದ್ಧ ಅಪಪ್ರಚಾರ ಮಾಡುತ್ತ ಬಂದಿದ್ದಾರೆಇAಥ ಸುಳ್ಳು ಆರೋಪಗಳ ಬಗ್ಗೆ ಯಾರೂ ಕಿವಿಗೊಡದೆ ಸದಾ ನಮ್ಮ ಕುಟುಂಬದ ಬೆಂಬಲಕ್ಕೆ ನಿಲ್ಲಬೇಕು ಎಂದು ಮನವಿ ಮಾಡಿದರು.
ರಾಜನಹಳ್ಳಿಯ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮಿಜಿಯವರನ್ನು ವಿವಿಧ ಸಮಾಜದ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು.
ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೇನ್ನವರ, ಸ್ಥಾಯಿ ಸಮಿತಿ ಚೇರಮನ್ ಸಿದ್ಧಪ್ಪ ಹುಚ್ಚರಾಯಪ್ಪಗೋಳ, ಜಿಪಂ ಮಾಜಿ ಸದಸ್ಯರಾದ ಟಿ.ಆರ್. ಕಾಗಲ, ಎಂ.ಎಲ್. ತೋಳಿನವರ, ಮಾಜಿ ಶಾಸಕ ಎಂ.ಎಲ್. ಮುತ್ತೆನ್ನವರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಭೀಮಗೌಡ ಪೋಲಿಸಗೌಡರ, ಸುರೇಶ ಸನದಿ, ಹನಮಂತ ದುರ್ಗನ್ನವರ, ಕಾಂತು ಎತ್ತಿನಮನಿ, ಪ್ರಭಾ ಶುರ‍್ಸ್ ಅಧ್ಯಕ್ಷ ಅಶೋಕ ಪಾಟೀಲ, ಉಪನ್ಯಾಸಕ ಮಾದನ್ನವರ, ಸುರೇಶ ಕಾಡದವರ, ಲಕ್ಷö್ಮಣ ತಪಸಿ, ಶಶಿಧರ ದೇಮಶೆಟ್ಟಿ, ಅಡಿವೆಪ್ಪ ಕಿತ್ತೂರ, ಅಬ್ಬಾಸ ದೇಸಾಯಿ, ದುರ್ಗಪ್ಪ ಶಾಸ್ತಿçಗಲ್ಲರ, ಪ್ರಭಾಕರ ಚೌಹಾನ, ಡಿ.ಎಂ. ದಳವಾಯಿ, ಬೀರಪ್ಪ ಡಬಾಜ, ಮಲ್ಲಪ್ಪ ಕೌಜಲಗಿ, ಬಸಗೌಡ ಪಾಟೀಲ, ರಾಮಣ್ಣ ಹುಕ್ಕೇರಿ, ಈಶ್ವರ ಮಟಗಾರ, ವಿನೋದ ಕರನಿಂಗ, ಪ್ರಕಾಶ ಕರನಿಂಗ, ಪುಂಡಲೀಕ ವಣ್ಣೂರ, ಶಂಕರಗೌಡ ಪಾಟೀಲ, ಶಿವನಗೌಡ ಕಮತ, ಬಸನಗೌಡ ನಿರ್ವಾಣಿ, ಬಸವರಾಜ ಪಟ್ಟಣಶೆಟ್ಟಿ, ಶಂಕರ ಬೂಸನ್ನವರ, ರಾಮಣ್ಣ ಸುಂಬಳಿ, ಜಯಗೌಡ ಪಾಟೀಲ, ಬಸವರಾಜ ವಾಲಿ, ಚನ್ನಗೌಡ ಪಾಟೀಲ, ಬಸಪ್ಪ ಉರುಬಿಹಟ್ಟಿ, ಸತ್ಯಗೌಡ ಪಾಟೀಲ, ಅಡಿವೆಪ್ಪ ನಾವಲಗಟ್ಟಿ, ಪುಂಡಲೀಕ ಓಬಿ ಇದ್ದರು.
ಸಮಾರಂಭದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಎಲ್ಲ ಸಮಾಜದ ಬಾಂಧವರು ಭಾಗವಹಿಸಿದ್ದರು. ಎ.ಬಿ. ಮಲಬನ್ನವರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಎ.ಜಿ. ಕೋಳಿ ನಿರೂಪಿಸಿದರು. ಎಲ್.ಎಚ್. ಬಂಡಿ ವಂದಿಸಿದರು.
——-ಬಾಕ್ಸ್——
ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಭವ್ಯ ಮೆರವಣಿಗೆ
ಕಾರ್ಯಕ್ರಮಕ್ಕೂ ಮುಂಚೆ ನಗರದ ಚನ್ನಮ್ಮ ವೃತ್ತದಲ್ಲಿ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮಿಜಿಯವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ನಗರದ ಚನ್ನಮ್ಮ ವೃತ್ತ, ವಾಲ್ಮೀಕಿ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ ಮಾರ್ಗವಾಗಿ ಮೆರವಣಿಗೆ ಸಾಗಿತು. ಬೃಹತ್ ಮೆರವಣಿಗೆ ಮೂಲಕ ರಾಣಿ ಚನ್ನಮ್ಮ, ವೀರ ಸಂಗೊಳ್ಳಿ ರಾಯಣ್ಣ, ವಿಶ್ವಗುರು ಬಸವೇಶ್ವರ, ಡಾ. ಬಾಬಾಸಾಹೇಬ ಅಂಬೇಡ್ಕರ, ಹರ್ಷಿ ವಾಲ್ಮೀಕಿ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

three × one =