ಅಂಕಲಗಿ ಆಸ್ಪತ್ರೆ 9ಕೋಟಿ ಅನುದಾನ-3೦ಹಾಸಿಗೆ ಮೇಲ್ದರ್ಜೆಗೆರಿಸಿದ ಶಾಸಕ ರಮೇಶ ಜಾರಕಿಹೊಳಿ!
ಗೋಕಾಕ: ತಾಲೂಕಿನ ಅಂಕಲಗಿ ಪಟ್ಟಣದ ಬಹುದಿನ ಬೇಡಿಕೆಯನ್ನು ಶಾಸಕ ರಮೇಶ ಜಾರಕಿಹೊಳಿ ಅವರು ಇಡೇರಿಸಿ ಅಂಕಲಗಿ ಪ್ರಾಥಮಿಕ ಆರೋಗ್ಯ ಕೇಂದ್ರ 3೦ ಹಾಸಿಗೆಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿ ಪಡಿಸಿದ್ದಾರೆ ಎಂದು ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡ್ರ ತಿಳಿಸಿದ್ದಾರೆ.
ಕಳೆದ ಹಲವು ವರ್ಷಗಳಿಂದ ಅಂಕಲಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬರುವ ರೋಗಿಗಳಿಗೆ ಬೇಡ್ ಸಮಸ್ಯೆ ಎದುರಾಗುತ್ತಿದ್ದು, ಇದು ಶಾಸಕ ರಮೇಶ ಜಾರಕಿಹೊಳಿ ಅವರ ಗಮನಕ್ಕೆ ಬರುತ್ತಿದ್ದಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಪ್ರಾಥಮಿಕ ಆರೋಗ್ಯ ಕೇಂದ್ರ 3೦ ಹಾಸಿಗೆಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ 9ಕೋಟಿ ಅನುದಾನ ಮಂಜುರು ಮಾಡಿಸಿದ್ದಾರೆ.
ಶಾಸಕ ರಮೇಶ ಜಾರಕಿಹೊಳಿ ಅವರನ್ನು ಅಂಕಲಗಿ ಪಟ್ಟಣದ ಸುತ್ತಮುತ್ತಲಿನ ಗ್ರಾಮಸ್ಥರು, ಜನಪ್ರತಿನಿಧಿಗಳು ಅಭಿನಂಧಿಸಿದ್ದಾರೆ.