Breaking News

ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್​ ಡಿಕ್ಕಿ; ಒಂದೇ ಕುಟುಂಬದ ನಾಲ್ವರು ಸಾವು

Spread the love

ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್​ ಡಿಕ್ಕಿ; ಒಂದೇ ಕುಟುಂಬದ ನಾಲ್ವರು ಸಾವು

ಯುವ ಭಾರತ ಸುದ್ದಿ ಹಾಸನ :
ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಕಾರೇಹಳ್ಳಿ‌ ಬಳಿ ಸಂಭವಿಸಿದೆ.
ರಸ್ತೆ ಬಳಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಪತಿ- ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲೋಕೇಶ್‌ , ಲಕ್ಷ್ಮಿ ಹಾಗೂ ಇಬ್ಬರು ಮಕ್ಕಳು ‌ಮೃತರಾಗಿದ್ದಾರೆ.
ತಡರಾತ್ರಿ ನುಗ್ಗೇಹಳ್ಳಿ- ತಿಪಟೂರು ರಸ್ತೆಯಲ್ಲಿ ಘಟನೆ ನಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಂಪೂರ್ಣ ‌ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ನುಗ್ಗೇಹಳ್ಳಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಹೊಸೂರಿನಿಂದ‌ ಪತ್ನಿಯನ್ನು ಕರೆದುಕೊಂಡು ನವಿಲೆ ಗ್ರಾಮಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಕಾರೇಹಳ್ಳಿ ಬಳಿ ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್‌ಗೆ ಡಿಕ್ಕಿ ಹೊಡೆದಿದೆ.


Spread the love

About Yuva Bharatha

Check Also

ಹಿರೇಬೂದನೂರ : ಭಕ್ತರ ಸನ್ಮಾನ

Spread the loveಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ …

Leave a Reply

Your email address will not be published. Required fields are marked *

five × 4 =