ಕೆ.ಕೆ.ಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ವಾಹನ

ಯುವ ಭಾರತ ಸುದ್ದಿ ಬೆಳಗಾವಿ :
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ಕೆ.ಕೆ.ಕೊಪ್ಪ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತಾಂತ್ರಿಕ ದೋಷದಿಂದ ವಾಹನಕ್ಕೆ ಬೆಂಕಿ ಹೊಂದಿಕೊಂಡಿದೆ. ಇದರಿಂದ ಐದು ಲಕ್ಷದ ಹಾನಿಯಾಗಿದೆ.
ಧಾರವಾಡದಿಂದ ಬೆಳಗಾವಿಗೆ ವಾಷಿಂಗ್ ಮಷಿನ್ ಸಾಗಿಸುತ್ತಿದ್ದ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ವಾಷಿಂಗ್ ಮಷಿನ್ ಕೆಳಗಿಳಿಸಿದ್ದಾರೆ. ಅಷ್ಟರಲ್ಲೇ ಎರಡು ಮಷಿನ್ ಸಂಪೂರ್ಣ ಸುಟ್ಟು ಹೋಗಿದೆ. ಪೆಟ್ರೋಲಿಂಗ್ ಮಾಡುತ್ತಿದ್ದ ಪೊಲೀಸರು ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ಬೆಂಕಿ ನಂದಿಸಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
YuvaBharataha Latest Kannada News