ನಿರ್ಮಾಣ ಹಂತದ ಶಾಲಾ ಕೊಠಡಿಯ ಗೋಡೆ ಕುಸಿದು ವಿದ್ಯಾರ್ಥಿ ಸಾವು

ಹುಬ್ಬಳ್ಳಿ:
ತಾಲೂಕಿನ ಕಿರೇಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೊಠಡಿಯ ಗೋಡೆ ಶುಕ್ರವಾರ ಬೆಳಿಗ್ಗೆ ಕುಸಿದು ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ಗಾಯಗೊಂಡಿದ್ದಾನೆ.
ಮೂರನೇ ತರಗತಿ ವಿದ್ಯಾರ್ಥಿ ವಿಸ್ತೃತ ಬೆಳಗಲಿ(9) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಏಳನೇ ತರಗತಿ ವಿದ್ಯಾರ್ಥಿ ಪ್ರಜ್ವಲ ನಾಗವಿ ಎಂಬ ವಿದ್ಯಾರ್ಥಿ ಗಾಯಗೊಂಡಿದ್ದು, ಆತನನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿದೆ.
ಬೆಳಿಗ್ಗೆ ಶಾಲೆಗೆ ಬಂದ ಮಕ್ಕಳು ನಿರ್ಮಾಣ ಹಂತದಲ್ಲಿರುವ ಶಾಲಾ ಕೊಠಡಿಯ ಬಳಿ ಆಟವಾಡುತ್ತಿದ್ದರು. ಏಕಾಏಕಿ ಗೋಡೆ ಕುಸಿದು ಮಕ್ಕಳ ಮೇಲೆ ಬಿದ್ದಿದೆ. ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
YuvaBharataha Latest Kannada News