Breaking News

ಕುಷ್ಟಗಿ ಬಳಿ ಅಪಘಾತ : ಸಿಎಂ ಪರಿಹಾರ ಘೋಷಣೆ

Spread the love

ಕುಷ್ಟಗಿ ಬಳಿ ಅಪಘಾತ : ಸಿಎಂ ಪರಿಹಾರ ಘೋಷಣೆ

ಬೆಂಗಳೂರು:
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ವ್ಯಾಪ್ತಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯ ಕಲಕೇರಿ ಬಳಿ ಭಾನುವಾರ ಸಂಜೆ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ ₹2ಲಕ್ಷ ಪರಿಹಾರ ಘೋಷಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಅತಿಯಾದ ವೇಗ, ಅಜಾಗರೂಕತೆಗಳೆ ಇಂಥ ಅಪಘಾತಗಳಿಗೆ ಕಾರಣ, ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ, ಸುರಕ್ಷಿತವಾಗಿರಿ ಎಂದು ಸಿಎಂ ತಿಳಿಸಿದ್ದಾರೆ.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

ten + 17 =