ಕೇರಳ ಸ್ಟೋರಿಗೆ ತೆರಿಗೆ ವಿನಾಯಿತಿ ಘೋಷಿಸಿದ ಆದಿತ್ಯನಾಥ

ಯುವ ಭಾರತ ಸುದ್ದಿ ನವದೆಹಲಿ:
ವಿವಾದಿತ ‘ದಿ ಕೇರಳ ಸ್ಟೋರಿ’ ಚಲನಚಿತ್ರ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.
ಈ ಕುರಿತು ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ಮಧ್ಯಪ್ರದೇಶ ಸರ್ಕಾರವು ದಿ ಕೇರಳ ಸ್ಟೋರಿ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿತ್ತು.
ಮತ್ತೊಂದೆಡೆ ವಿವಾದಿತ ಚಿತ್ರ ಪ್ರದರ್ಶನಕ್ಕೆ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ನಿಷೇಧ ಹೇರಲಾಗಿದೆ. ಇದರ ವಿರುದ್ಧ ಕೋರ್ಟ್‌ಗೆ ಹೋಗುವುದಾಗಿ ಚಿತ್ರ ನಿರ್ಮಾಪಕ ವಿಪುಲ್ ಶಾ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕ ಚುನಾವಣಾ ಪ್ರಚಾರ ಸಂದರ್ಭದಲ್ಲೂ ದಿ ಕೇರಳ ಸ್ಟೋರಿ ಚಲನಚಿತ್ರವನ್ನು ಪ್ರಸ್ತಾಪಿಸಿದ್ದ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ಮಾಡಿದ್ದರು.
YuvaBharataha Latest Kannada News