ರಾಯಚೂರು, ಧಾರವಾಡದಲ್ಲಿ ಏಮ್ಸ್ : ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಿದ ರಾಜ್ಯ

ಯುವ ಭಾರತ ಸುದ್ದಿ ಬೆಳಗಾವಿ :
ರಾಜ್ಯದ ಧಾರವಾಡ ಮತ್ತು ರಾಯಚೂರಿನಲ್ಲಿ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್) ಆಸ್ಪತ್ರೆಯನ್ನು ಸ್ಥಾಪಿಸುವ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಕಳಿಸಲಾಗಿದೆ.
ಈ ಬಗ್ಗೆ ವಿಧಾನ ಮಂಡಲದ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರ ಪ್ರಶ್ನೆಗೆ ಆರೋಗ್ಯ ಸಚಿವ ಸುಧಾಕರ್ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಉತ್ತರ ನೀಡಿದರು.
ಧಾರವಾಡದ ಇಟಗಟ್ಟದಲ್ಲಿ ಏಮ್ಸ್ ಸಂಸ್ಥೆ ಸ್ಥಾಪನೆಗೆ ಸಂಬಂಧಿಸಿದಂತೆ ಈಗಾಗಲೇ ಕೇಂದ್ರದ ಆರೋಗ್ಯ ಇಲಾಖೆ ಆಗಮಿಸಿ ಸ್ಥಳ ಪರಿಶೀಲನೆ ಮಾಡಿ ತೆರಳಿದೆ ಎಂದು ತಿಳಿಸಿದರು.
YuvaBharataha Latest Kannada News