ಅಂಬೇಡ್ಕರ್ ಜಯಂತಿ: 21 ರಂದು ಪೂರ್ವ ಸಿದ್ಧತಾ ಸಭೆ

ಯುವ ಭಾರತ ಸುದ್ದಿ ಬೆಳಗಾವಿ :
ಸಂವಿಧಾನ ಶಿಲ್ಪಿ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 132 ನೇ ಜಯಂತಿ ಏಪ್ರಿಲ್ 14 ರಂದು ಮತ್ತು ಮಾರ್ಚ್ 5 ರಂದು ಹಸಿರು ಕ್ರಾಂತಿ ಹರಿಕಾರ ಮಾಜಿ ಪ್ರಧಾನಿ ಡಾ. ಬಾಬು ಜಗಜೀವನರಾಮರವರ 116ನೇ ಜಯಂತಿಗಳನ್ನು ಆಚರಿಸುವ ಸಲುವಾಗಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ (ಮಾ.21) ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ.
ಸದರಿ ಸಭೆಗೆ ಸಮುದಾಯದ ಎಲ್ಲಾ ಮುಖಂಡರುಗಳು ಮತ್ತು ಸಂಘ ಸಂಸ್ಥೆಗಳ ಮುಖಂಡರುಗಳು ಹಾಜರಾಗಿ ತಮ್ಮ ಸಲಹೆ, ಸೂಚನೆಗಳನ್ನು ನೀಡಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
YuvaBharataha Latest Kannada News