ಅನ್ನಭಾಗ್ಯ ಯೋಜನೆ: ಹಣ ವರ್ಗಾವಣೆ
ಬೆಳಗಾವಿ :
ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ “ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಫಲಾನುಭವಿಗಳಿಗೆ ಪ್ರತಿ ತಿಂಗಳು ಹೆಚ್ಚುವರಿಯಾಗಿ ವಿತರಿಸಲಾಗುವ ೦೫ ಕೆ.ಜಿ ಆಹಾರಧಾನ್ಯದ ಬದಲಾಗಿ ಪ್ರತಿಕೆ.ಜಿಗೆ ರೂ.೩೪/- ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಆಃಖಿ ಮೂಲಕ ಹಣವನ್ನು ವರ್ಗಾಯಿಸಲಾಗುವುದು.
ಆದ್ಯತಾ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ೫ ಕೆ.ಜಿ ಅಕ್ಕಿಯ ಬದಲಾಗಿ ಪ್ರತಿ ಕೆ.ಜಿಗೆ ರೂ.೩೪*೫=೧೭೦ ಹಾಗೂ ಅಂತ್ಯೋದಯ ಅನ್ನಯೋಜನೆ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದಲ್ಲಿ ೦೩ ಅಥವಾ ೦೩ಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬವು ಈಗಾಗಲೇ ಪ್ರತಿ ತಿಂಗಳು ೩೫ಕೆ.ಜಿ ಆಹಾರಧಾನ್ಯವನ್ನು ಪಡೆಯುತ್ತಿರುವದರಿಂದ ಅಂತಹ ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿ ಕುಟುಂಬಗಳಿಗೆ ನಗದು ಸೌಲಭ್ಯವನ್ನು ನೀಡಲಾಗುವದಿಲ್ಲ.
ಅಂತ್ಯೋದಯ ಅನ್ನಯೋಜನೆ ಪಡಿತರ ಚೀಟಿಯ ಕುಟುಂಬದಲ್ಲಿ ೦೪ ಸದಸ್ಯರಿದ್ದರೆ ಸದರಿ ಕುಟುಂಬಕ್ಕೆ ರೂ.೧೭೦ (೩೪*೫*೧) ಗಳನ್ನು, ೦೫ ಸದಸ್ಯರನ್ನು ಹೊಂದಿರುವ ಕುಟುಂಬಕ್ಕೆ ರೂ.೫೧೦ (೩೪*೫*೩) ಗಳನ್ನು, ೦೬ ಸದಸ್ಯರನ್ನು ಹೊಂದಿರುವ ಕುಟುಂಬಕ್ಕೆ ರೂ.೮೫೦(೩೪*೫*೫) ಗಳನ್ನು ನೀಡಲಾಗುತ್ತದೆ.
ಹೆಚ್ಚಿನ ಸದಸ್ಯರಿದ್ದಲ್ಲಿ ಇದೇ ರೀತಿಯ ಅನುಪಾತವು ಮುಂದುವರೆಯುತ್ತದೆ. ಕಳೆದ ಮೂರು ತಿಂಗಳುಗಳಲ್ಲಿ ಪಡಿತರ ಆಹಾರ ಧಾನ್ಯವನ್ನು ಪಡೆದುಕೊಂಡಿರುವ ಕುಟುಂಬಗಳು ಮಾತ್ರ ನಗದು ವರ್ಗಾವಣೆಯ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ. ಪಡಿತರ ಚೀಟಿಯಲ್ಲಿ ಕುಟುಂಬ ಮುಖ್ಯಸ್ಥರನ್ನು ಹೊಂದಿರದ ಅಥವಾ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರನ್ನು ಹೊಂದಿರುವ ಪಡಿತರ ಚೀಟಿಗಳನ್ನು ನಗದು ವರ್ಗಾವಣೆ ಸೌಲಭ್ಯದಿಂದ ಹೊರಗಿಡಲಾಗಿದೆ. ಈ ಸಮಸ್ಯೆಯನ್ನು ಸಂಬಂಧಿಸಿದ ತಾಲೂಕಿನ ತಹಶೀಲ್ದಾರ ಕಾರ್ಯಾಲಯಕ್ಕೆ ಬೇಟಿ ನೀಡಿ ಸರಿಪಡಿಸಿಕೊಳ್ಳಬಹುದಾಗಿದೆ.
ಜಿಲ್ಲೆಯಲ್ಲಿರುವ ಒಟ್ಟು ೧೧,೪೯,೫೦೧ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿಗಳು ಚಾಲ್ತಿಯಲ್ಲಿದ್ದು, ಆಧಾರ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಿರುವ ೮,೨೯,೦೦೧ ಪಡಿತರ ಚೀಟಿಗಳ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಆಃಖಿ ಮೂಲಕ ರೂ. ೪೬,೫೪,೧೮,೫೨೦/-ನ್ನು ಈಗಾಗಲೇ ಹಣ ವರ್ಗಾವಣೆ ಮಾಡಲಾಗಿದೆ.
ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಈ ಕೆಳಕಂಡ ಸಂದರ್ಭಗಳಲ್ಲಿ ನಗದು ವರ್ಗಾವಣೆ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಾಧ್ಯವಿರುವದಿಲ್ಲ.
ಆಧಾರ ಸಂಖ್ಯೆಯನ್ನು ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಲಿಂಕ್ ಮಾಡದೇ ಇರುವುದು, ಪಡಿತರ ಚೀಟಿಯಲ್ಲಿ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರಿದ್ದಾಗ ಅಥವಾ ಮುಖ್ಯಸ್ಥರೇ ಇಲ್ಲದಿದ್ದ ಸಂದರ್ಭದಲ್ಲಿ, ಆಧಾರ ಸಂಖ್ಯೆಯನ್ನು ತಪ್ಪಾಗಿ ನಮೂದಿಸಿದಾಗ, ಬ್ಯಾಂಕಿನಲ್ಲಿ ಇ-ಕೆವೈಸಿ ಕಾರ್ಯ ಪೂರ್ಣಗೊಳಿಸದಿರುವಾಗ, ಕಳೆದ ಮೂರು ತಿಂಗಳಲ್ಲಿ ಒಂದು ತಿಂಗಳಾದರು ಪಡಿತರ ಪಡೆಯದೇ ಇರುವಾಗ ಸದರಿ ಕಾರಣಗಳಿಂದ ಪಡಿತರ ಚೀಟಿದಾರಿರಗೆ ಹಣ ಜಮೆಯಾಗದೇ ಇರುವದರಿಂದ ಸದರಿಯವರು ಬ್ಯಾಂಕಿಗೆ ಭೇಟಿ ನೀಡಿ ತಮ್ಮ ಮೋಬೈಲ್ ಸಂಖ್ಯೆ ಮತ್ತು ಆಧಾರ ಸಂಖ್ಯೆಯನ್ನು ಕಡ್ಡಾಯವಾಗಿ ಜು.೨೦ ರ ಒಳಗಾಗಿ ಲಿಂಕ್ ಮಾಡಿಸಿ, ಖಾತೆಯನ್ನು ಸಕ್ರಿಯಗೊಳಿಸಿದ್ದಲ್ಲಿ ಮಾತ್ರ ಅಗಸ್ಟ್ ಗೆ ಸಂಬಂಧಿಸಿದ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸಲು ಕ್ರಮ ವಹಿಸಲಾಗುವುದು.
ಅರ್ಹ ಪಡಿತರ ಚೀಟಿದಾರರು ಆಃಖಿ ಮೂಲಕ ಹಣ ವರ್ಗಾವಣೆಯಾದ ಬಗ್ಗೆ ವೆಬ್ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
****