ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಅಶೋಕ ದುಡಗುಂಟಿ ಅಧಿಕಾರ ಸ್ವೀಕಾರ

ಬೆಳಗಾವಿ :
ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಅಶೋಕ ದುಡಗುಂಟಿ ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಈ ಹಿಂದೆ ಅವರು ಕಾರ್ಯನಿರ್ವಸಿದ ಅನುಭವ ಹೊಂದಿದ್ದಾರೆ. ರಾಜ್ಯ ಸರಕಾರ ಇದೀಗ ಅವರನ್ನು ಮತ್ತೊಮ್ಮೆ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಿದೆ.
ಬೆಳಗಾವಿ ಮಹಾನಗರವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ತಮ್ಮದೇ ಆದ ಕನಸು ಕಂಡಿರುವ ಅಶೋಕ ದುಡಗುಂಟಿ ಅವರು ತಮ್ಮ ಅವಧಿಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿ ಬೆಳಗಾವಿಯನ್ನು ಸ್ಮಾರ್ಟ್ ಸಿಟಿ ಮಾಡುವುದರಲ್ಲಿ ಯಾವ ಅನುಮಾನವೂ ಇಲ್ಲ.
YuvaBharataha Latest Kannada News