Breaking News

ಅಥಣಿ ಟಿಕೆಟ್ : ಸವದಿ ವಿರುದ್ಧ ಸಾಹುಕಾರ್ ಕೆಂಡ

Spread the love

ಅಥಣಿ ಟಿಕೆಟ್ : ಸವದಿ ವಿರುದ್ಧ ಸಾಹುಕಾರ್ ಕೆಂಡ

ಯುವ ಭಾರತ ಸುದ್ದಿ ಬೆಳಗಾವಿ:
ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ತಮ್ಮ ಬೆಂಬಲಿಗ ಮಹೇಶ ಕುಮಟಳ್ಳಿ ಅವರಿಗೆ ಟಿಕೆಟ್ ದೊರೆಯುವ ಬಗ್ಗೆ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮತ್ತೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಥಣಿಯಲ್ಲಿ ಬಿಜೆಪಿ ಟಿಕೆಟ್ ಪಡೆಯುವ ಕನಸು ಕಂಡಿರುವ ಲಕ್ಷ್ಮಣ ಸವದಿ ಅವರ ವಿರುದ್ಧ ರಮೇಶ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಈ ಬಾರಿ ಮತ್ತೆ ಮಹೇಶ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂದು ನುಡಿದಿರುವ ರಮೇಶ ಜಾರಕಿಹೊಳಿ ಅವರು ಲಕ್ಷ್ಮಣ ಸವದಿ ಅವರು ಏಕೆ ಚಡಪಡಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ಸೋಲು, ಗೆಲುವು ದೇವರ ಇಚ್ಛೆ. ಲಕ್ಷ್ಮಣ ಸವದಿ ಏಕೆ ಹತಾಶರಾಗಿ ಮಾತನಾಡುತ್ತಿದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಹೆಮ್ಮರವಾಗಿದ್ದಾರೆ. ಅವರ ಮುಂದೆ ನಾನು, ಸವದಿ ಒಂದು ಗಿಡದ ತಪ್ಪಲಷ್ಟೇ. ಅಥಣಿ ಟಿಕೆಟ್‌ ಬಗ್ಗೆ ನಾಯಕರೇ ನಿರ್ಣಯ ತೆಗೆದುಕೊಳ್ಳಲಿದ್ದಾರೆ. ಏಕೆ ಇಷ್ಟು ಚಡಪಡಿಸುತ್ತಿದ್ದೀಯಾ? ಲಕ್ಷ್ಮಣ ಅಣ್ಣಾ, ಆರಾಮಾಗಿರು…’ ಎಂದು ಶಾಸಕ ರಮೇಶ ಜಾರಕಿಹೊಳಿ ಗುಡುಗಿದರು.

ಅಥಣಿಯಲ್ಲಿ ಶಾಸಕ ಮಹೇಶ ಕುಮಠಳ್ಳಿ ಸೋತರೆ, ಆ ಹಣೆಪಟ್ಟಿ ನನಗೆ ಕಟ್ಟಲು ಷಡ್ಯಂತ್ರ ನಡೆದಿದೆ ಎಂಬ ಲಕ್ಷ್ಮಣ ಸವದಿ ಹೇಳಿಕೆಗೆ ಜಾರಕಿಹೊಳಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. ಸಮ್ಮಿಶ್ರ ಸರಕಾರ ಸರಕಾರ ಪತನಗೊಂಡು ಬಿಜೆಪಿ ಸೇರಿದ ಮಹೇಶ ಕುಮಠಳ್ಳಿ ಸೇರಿದಂತೆ 17 ಶಾಸಕರಿಗೆ ಎಲ್ಲರಿಗೂ ಟಿಕೆಟ್‌ ಸಿಗಲಿದೆ ಎಂದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

three + 11 =