Breaking News

Yuva Bharatha

ವಿಕಲಚೇತನರು ಹಾಗೂ 80 ವರ್ಷ ಮೇಲ್ಪಟ್ಟವರಿಗೆ ಐಚ್ಛಿಕ ಅಂಚೆ ಮತ ಸೌಲಭ್ಯ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ವಿಕಲಚೇತನರು ಹಾಗೂ 80 ವರ್ಷ ಮೇಲ್ಪಟ್ಟವರಿಗೆ ಐಚ್ಛಿಕ ಅಂಚೆ ಮತ ಸೌಲಭ್ಯ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಲು ಸಾಧ್ಯವಾಗದ 80 ವರ್ಷ ಮೇಲ್ಪಟ್ಟವರು ಹಾಗೂ ವಿಕಲಚೇತನ ಮತದಾರರಿಗೆ ಅಂಚೆ ಮತಪತ್ರಗಳ ಮೂಲಕ ತಮ್ಮ ಮನೆಯಿಂದಲೇ ಮತದಾನ ಮಾಡುವಂತಹ ಐಚ್ಛಿಕ ಅವಕಾಶವನ್ನು ಕಲ್ಪಿಸಲಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಅಂಚೆ ಮತಪತ್ರ ವಿತರಣೆ, ಮತದಾನ …

Read More »

ಬೆಳಗಾವಿಯ ದೇಶಪಾಂಡೆಯವರಿಗೆ ಒಲಿದ ಕುಲಪತಿ ಹುದ್ದೆ

ಬೆಳಗಾವಿಯ ದೇಶಪಾಂಡೆಯವರಿಗೆ ಒಲಿದ ಕುಲಪತಿ ಹುದ್ದೆ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಗೋಗಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಕೆಲಸ ಮಾಡಿದ್ದ ಹಾಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಡಾ.ಆನಂದ ಶರದ ದೇಶಪಾಂಡೆ ಅವರನ್ನು ರಾಜ್ಯ ಸರ್ಕಾರ ಬಾಗಲಕೋಟೆ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಕೆಲ ತಿಂಗಳುಗಳ ಹಿಂದೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಹೊಸ ಕುಲಪತಿ ನೇಮಕ ವೇಳೆ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬಂದಿತ್ತು. …

Read More »

7 ನೂತನ ವಿ.ವಿ.ಗಳಿಗೆ ಕುಲಪತಿಗಳ ನೇಮಕ

7 ನೂತನ ವಿ.ವಿ.ಗಳಿಗೆ ಕುಲಪತಿಗಳ ನೇಮಕ ಯುವ ಭಾರತ ಸುದ್ದಿ ಬೆಂಗಳೂರು :                   ರಾಜ್ಯ ಸರಕಾರವು ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳನ್ನು ನೇಮಿಸಿ, ಸೋಮವಾರ ಆದೇಶ ಹೊರಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಇದರಂತೆ ಬೆಂಗಳೂರು ವಿವಿ ಪತ್ರಿಕೋದ್ಯಮ ವಿಭಾಗದ …

Read More »

ಮುಸ್ಲಿಂ ಸಮುದಾಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ : ಬಾಲಚಂದ್ರ ಜಾರಕಿಹೊಳಿ ವಾಗ್ದಾನ

ಮುಸ್ಲಿಂ ಸಮುದಾಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ : ಬಾಲಚಂದ್ರ ಜಾರಕಿಹೊಳಿ ವಾಗ್ದಾನ ಯುವ ಭಾರತ ಸುದ್ದಿ ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಮುಸ್ಲಿಂ ಸಮುದಾಯ ಬಾಂಧವರಿಗೆ ಇತರೆ ಸಮಾಜದವರಿಂದ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಂಡಿದ್ದು, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಎಲ್ಲ ಸಮುದಾಯಗಳು ಒಗ್ಗಟ್ಟಿನ ಮಂತ್ರ ಪಠಿಸಿ ಶಾಂತಿ ಸಾಮರಸ್ಯವನ್ನು ಕಾಪಾಡಿಕೊಂಡು ಬರುತ್ತಿವೆ ಎಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಪಟ್ಟಣದ ತಹಶೀಲದಾರ ಕಚೇರಿಯ …

Read More »

ಅಂಬೇಡ್ಕರ್ ಜಯಂತಿ: 21 ರಂದು ಪೂರ್ವ ಸಿದ್ಧತಾ ಸಭೆ

ಅಂಬೇಡ್ಕರ್ ಜಯಂತಿ: 21 ರಂದು ಪೂರ್ವ ಸಿದ್ಧತಾ ಸಭೆ ಯುವ ಭಾರತ ಸುದ್ದಿ ಬೆಳಗಾವಿ : ಸಂವಿಧಾನ ಶಿಲ್ಪಿ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 132 ನೇ ಜಯಂತಿ ಏಪ್ರಿಲ್ 14 ರಂದು ಮತ್ತು ಮಾರ್ಚ್ 5 ರಂದು ಹಸಿರು ಕ್ರಾಂತಿ ಹರಿಕಾರ ಮಾಜಿ ಪ್ರಧಾನಿ ಡಾ. ಬಾಬು ಜಗಜೀವನರಾಮರವರ 116ನೇ ಜಯಂತಿಗಳನ್ನು ಆಚರಿಸುವ ಸಲುವಾಗಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ (ಮಾ.21) ಮಧ್ಯಾಹ್ನ …

Read More »

ಅಥಣಿ ಆಮ್ ಆದ್ಮಿ ಅಭ್ಯರ್ಥಿಯಾಗಿ ಸಂಪತಕುಮಾರ ಶೆಟ್ಟಿ ಅಂತಿಮ!

ಅಥಣಿ ಆಮ್ ಆದ್ಮಿ ಅಭ್ಯರ್ಥಿಯಾಗಿ ಸಂಪತಕುಮಾರ ಶೆಟ್ಟಿ ಅಂತಿಮ! ಯುವ ಭಾರತ ಸುದ್ದಿ ಅಥಣಿ : ಕರ್ನಾಟಕ ವಿಧಾನಸಭೆಯ ಚುನಾವಣೆಯ ಹಿನ್ನಲೆಯಲ್ಲಿ ಇಂದು ಆಮ್ ಆದ್ಮಿ ಪಕ್ಷವು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಅದರಲ್ಲಿ ಅಥಣಿ ವಿಧಾನಸಭೆ ಆಮ್ ಆದ್ಮಿಯಿಂದ ಸಂಪತಕುಮಾರ ಶೆಟ್ಟಿ ಅವರ ಹೆಸರು ಅಂತಿಮಗೊಳಿಸಲಾಗಿದೆ. ಕಳೆದ ಒಂದು ವರ್ಷದಿಂದ ಆಮ್ ಆದ್ಮಿ ಪಕ್ಷದ ಚಿಕ್ಕೋಡಿ ಜಿಲ್ಲಾ ಸಂಯೋಜಕರಾಗಿ ಪಕ್ಷವನ್ನು ಕಟ್ಟಿ ಬೆಳೆಸಿದ ಹಿನ್ನಲೆಯಲ್ಲಿ ಅವರಿಗೆ ಪಕ್ಷ ಟಿಕೆಟ್ ನೀಡಿದೆ. …

Read More »

ರಾಣಿ ಚನ್ನಮ್ಮ ವಿವಿ 11 ನೇ ಘಟಿಕೋತ್ಸವ :‌ ದಿ.ಸುರೇಶ ಅಂಗಡಿ ಸೇರಿ ಇಬ್ಬರಿಗೆ ಗೌರವ ಡಾಕ್ಟರೇಟ್

ರಾಣಿ ಚನ್ನಮ್ಮ ವಿವಿ 11 ನೇ ಘಟಿಕೋತ್ಸವ :‌ ದಿ.ಸುರೇಶ ಅಂಗಡಿ ಸೇರಿ ಇಬ್ಬರಿಗೆ ಗೌರವ ಡಾಕ್ಟರೇಟ್ ಯುವ ಭಾರತ ಸುದ್ದಿ ಬೆಳಗಾವಿ : ಕಲಿತ ವಿದ್ಯೆಯು ಬದುಕಿನಲ್ಲಿ ಶಾಶ್ವತವಾಗಿರುತ್ತದೆ. ಇಂದಿನ ತಂತ್ರಜ್ಞಾನ ಯುಗದಲ್ಲಿ ಅಗತ್ಯ ಕೌಶಲವನ್ನು ಗಳಿಸಬೇಕು. ಯಾವುದೇ ಕ್ಷೇತ್ರವಿರಲಿ ಕೌಶಲದಿಂದ ಮಾತ್ರ ಯಶಸ್ಸು ಸಾಧ್ಯವಾಗುತ್ತದೆ. ಆದ್ದರಿಂದ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು ನಿರಂತರವಾಗಿ ಪ್ರಯತ್ನಿಸಬೇಕು ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಕರೆ ನೀಡಿದರು. ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಸೋಮವಾರ …

Read More »

ಸೋಲು-ಗೆಲುವಿಗಿಂತ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಅತ್ಯಂತ ಮುಖ್ಯ : ಕಿರಣ ಜಾಧವ

ಸೋಲು-ಗೆಲುವಿಗಿಂತ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಅತ್ಯಂತ ಮುಖ್ಯ : ಕಿರಣ ಜಾಧವ ಯುವ ಭಾರತ ಸುದ್ದಿ ಬೆಳಗಾವಿ : ಕನ್ನಡ ಮಹಿಳಾ ಸಂಘ, ಸಾಹಿತ್ಯ ಕಲಾ ವೇದಿಕೆ ವತಿಯಿಂದ ರಾಗ ರಂಜಿನಿ ಕನ್ನಡ ಗೀತೆಗಳ ಸ್ಪರ್ಧೆ ಟಿಳಕವಾಡಿಯ ರೈಲ್ವೆ ಗೇಟ್ ಬಳಿಯ ವೇರ್ಣೇಕರ ಭವನದಲ್ಲಿ ರವಿವಾರ ಆಯೋಜಿಸಲಾಗಿತ್ತು. ಬಿಜೆಪಿ ನಾಯಕ ಕಿರಣ ಜಾಧವ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಇಂತಹ ಸ್ಪರ್ಧೆಗಳು ಪ್ರತಿಭೆಯನ್ನು ಹೊರ ತರುವಲ್ಲಿ ಅತ್ಯಂತ ಸಹಾಯಕವಾಗಿ ಪರಿಣಮಿಸುತ್ತವೆ. ಸ್ಪರ್ಧೆಗಳಲ್ಲಿ …

Read More »

ರಮೇಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ ಬೆಳಗಾವಿ ಗ್ರಾಮೀಣ ಕಾಂಗ್ರೇಸ್ ಕಾರ್ಯಕರ್ತರು.

ರಮೇಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ ಬೆಳಗಾವಿ ಗ್ರಾಮೀಣ ಕಾಂಗ್ರೇಸ್ ಕಾರ್ಯಕರ್ತರು. ಗೋಕಾಕ: ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಗ್ರಾಮೀಣ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ದಸ್ತಗಿರ ಮುಲ್ಲಾ ಅವರು ತಮ್ಮ ಬೆಂಬಲಿಗರೊAದಿಗೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ತೋರೆದು ಬಿಜೆಪಿ ಪಕ್ಷ ಸೇರಿದರು. ದಸ್ತಗೀರ ಮುಲ್ಲಾ, ಹಮೀದ ಮುಲ್ಲಾ, ಅಬ್ಬು ಮಕಾನದಾರ, ಮುಜಮ್ಮೀಲ ದೇವಡಿ ಸೇರಿ ೧೧ಜನ ಕಾಂಗ್ರೆಸ್ ಕಾರ್ಯಕರ್ತರು …

Read More »

ಕಾಂಗ್ರೆಸ್ ಪಕ್ಷದ ನಾಲ್ಕನೇ ಗ್ಯಾರಂಟಿ 3000 ರೂ.ನಿರುದ್ಯೋಗ ಭತ್ಯೆ ಘೋಷಣೆ ಮಾಡಿದ ರಾಹುಲ್ ಗಾಂಧಿ !

ಕಾಂಗ್ರೆಸ್ ಪಕ್ಷದ ನಾಲ್ಕನೇ ಗ್ಯಾರಂಟಿ 3000 ರೂ.ನಿರುದ್ಯೋಗ ಭತ್ಯೆ ಘೋಷಣೆ ಮಾಡಿದ ರಾಹುಲ್ ಗಾಂಧಿ ! ಯುವ ಭಾರತ ಸುದ್ದಿ ಬೆಳಗಾವಿ: ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಯುವನಿಧಿ ಹೆಸರಿನಲ್ಲಿ ಪ್ರತಿ ತಿಂಗಳ ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3000, ಡಿಪ್ಲೋಮೋ ಪದವೀಧರರಿಗೆ ಒಂದುವರೆ ಸಾವಿರ ರೂಪಾಯಿ ನೀಡಲಾಗುವುದು ಎಂದು ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ನಗರದ ಸಿಪಿಎಡ್ ಮೈದಾನದಲ್ಲಿ ನಡೆದ ಯುವ ಕ್ರಾಂತಿ ಸಮಾವೇಶದಲ್ಲಿ ರಾಹುಲ್ …

Read More »