Breaking News

Yuva Bharatha

ಜಲಾವೃತಗೊಂಡ ಮನೆಯಲ್ಲಿ ಸಿಲುಕಿದ ಹಸುಗೂಸು ಬಾಣಂತಿ ರಕ್ಷಿಸಿದ ಮಾಣಿಕವಾಡಿ ಗ್ರಾಮಸ್ಥರು.!

ಜಲಾವೃತಗೊಂಡ ಮನೆಯಲ್ಲಿ ಸಿಲುಕಿದ ಹಸುಗೂಸು ಬಾಣಂತಿ ರಕ್ಷಿಸಿದ ಮಾಣಿಕವಾಡಿ ಗ್ರಾಮಸ್ಥರು.! ಗೋಕಾಕ: ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ ಸೋಮವಾರ ಮುಂಜಾನೆ ೧೧ಂಟೆಗೆ ಸುರಿದ ಭಾರಿ ಮಳೆಯಿಂದಾಗಿ ಇಡಿ ಗ್ರಾಮವೇ ಸಂಪೂರ್ಣ ಜಲಾವೃತವಾಗಿತ್ತು, ಗ್ರಾಮ ಮನೆಯೊಂದರಲ್ಲಿ ಸಿಲುಕಿಕೊಂಡಿದ್ದ ಹಸುಗೂಸು ಸೇರಿ ಬಾಣಂತಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮಳೆಯಿಂದ ಮಾಣಿಕವಾಡಿ ಗ್ರಾಮ ಏಕಾಏಕಿ ಜಲಾವೃತ್ತಗೊಂಡ ಹಿನ್ನಲೆ ಮನೆಯಲ್ಲಿಯೇ ಸಿಲುಕಿದ್ದ ೧೨ದಿನದ ಹಸುಗೂಸು ಮತ್ತು ಬಾಣಂತಿ ತಾಯಿಯನ್ನು ಸ್ಥಳೀಯರು ಹಗ್ಗದ ಸಹಾಯದಿಂದ ಮತ್ತು ಒಬ್ಬರೊಬ್ಬರು ಕೈ ಹಿಡಿದು …

Read More »

ನಮ್ಮಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ದರ್ಜೆಯ ಹುದ್ದೆಗಳನ್ನು ಅಲಂಕರಿಸಬೇಕು-ಶಾಸಕ ಬಾಲಚಂದ್ರ ಜಾರಕಿಹೊಳಿ!!

ನಮ್ಮಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ದರ್ಜೆಯ ಹುದ್ದೆಗಳನ್ನು ಅಲಂಕರಿಸಬೇಕು-ಶಾಸಕ ಬಾಲಚಂದ್ರ ಜಾರಕಿಹೊಳಿ          ಅರಭಾವಿಯಲ್ಲಿ ಜರುಗಿದ ಮೂಡಲಗಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.  ಜ್ಯೂನಿಯರ್ ಕಾಲೇಜುಗಳ ಆರಂಭಕ್ಕೆ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಕೆ. ಮೂಡಲಗಿ: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳು ಉನ್ನತವಾದ ಸ್ಥಾನ ಪಡೆಯಬೇಕೆಂಬುದು ನಮ್ಮ ಇರಾದೆಯಾಗಿದ್ದು, ಈ ದಿಸೆಯಲ್ಲಿ ಉಭಯ ತಾಲೂಕಿನಲ್ಲಿ ಉತ್ತಮ ಗುಣಮಟ್ಟದ …

Read More »

ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ ತುರ್ತು ಸ್ಫಂಧಿಸಿದ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ.!

ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ ತುರ್ತು ಸ್ಫಂಧಿಸಿದ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ.! ಯುವಭಾರತ ಸುದ್ದಿ ಗೋಕಾಕ: ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಸುಮಾರು ನೂರಕ್ಕು ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರೀದ ಭಾರಿ ಮಳೆಗೆ ಮಾಣಿಕವಾಡಿ, ಮರಡಿಮಠ ಕ್ರಾಸ್ ಸೇರಿ ಕೊಣ್ಣೂರು ರಸ್ತೆಯ ಬದಿಯ ಮನೆಗಳಿಗೆ ಭಾರಿ ಪ್ರಮಾಣದ ನೀರು ನುಗ್ಗಿದ್ದು, …

Read More »

ಗೋಕಾಕನಲ್ಲಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ!!

ಗೋಕಾಕನಲ್ಲಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ!! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನಾಧ್ಯಂತ ಸೋಮವಾರ ಒಂದು ಗಂಟೆಗೂ ಹೆಚ್ಚು ಕಾಲ ನಿರಂತರವಾಗಿ ಸುರಿದ ಭಾರಿ ಮಳೆಗೆ ಇನ್ನಿಲ್ಲದ ಆವಾಂತರಗಳು ಸೃಷ್ಟಿಯಾಗಿವೆ. ಗೋಕಾಕ ನಗರ ಸೇರಿ ತಾಲೂಕಿನ ವಿವಿಧೆಡೆ ಮಳೆಯಿಂದಾಗಿ ರಸ್ತೆ ಮೇಲೆ ಹೊಳೆಯಂತೆ ನೀರು ಹರಿಯುವ ದೃಶ್ಯ ಕಂಡು ಬಂದಿತು. ಅಲ್ಲದೇ ನೂರಾರು ಮನೆ ಮತ್ತು ವಾಣಿಜ್ಯ ಮಳಿಗೆಗಳಲ್ಲಿ ನೀರು ನುಗ್ಗಿರುವ ಹಿನ್ನಲೆ ನೀರು ಹೋರಹಾಕಲು ಜನರು ಪರದಾಟ …

Read More »

ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯ-ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ.!

ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯ-ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ.! ಗೋಕಾಕ: ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯವಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಿ ಶಿಕ್ಷಕರು ಕಾರ್ಯನಿರ್ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ …

Read More »

ಸಮಾಜ ಗೌರವಿಸುವಂತಹ ವ್ಯಕ್ತಿಗಳಾಗಿ-ಪ್ರಾಚಾರ್ಯ ಎ ಬಿ ಪಾಟೀಲ.!

ಸಮಾಜ ಗೌರವಿಸುವಂತಹ ವ್ಯಕ್ತಿಗಳಾಗಿ-ಪ್ರಾಚಾರ್ಯ ಎ ಬಿ ಪಾಟೀಲ.! ಗೋಕಾಕ: ವಿದ್ಯಾರ್ಥಿಗಳು ಪದವಿಯೊಂದಿಗೆ ಪ್ರಜ್ಞಾವಂತರಾಗಿ ತಮ್ಮ ಸುಂದರವಾದ ಬದುಕನ್ನು ರೂಪಿಸಿಕೊಳ್ಳುವಂತೆ ಎಸ್.ಎಲ್.ಜೆ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಎ ಬಿ ಪಾಟೀಲ ಹೇಳಿದರು. ಅವರು, ರವಿವಾರದಂದು ನಗರದ ಶ್ರೀ ಲಕ್ಷö್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿಗೆ ತಾವು ಕಲಿತ ವಿದ್ಯೆ ಹಾಗೂ ತಮ್ಮಲ್ಲಿರುವ ಕೌಶಲ್ಯಗಳಿಂದ ಸಾಧಕರಾಗಿ ಉತ್ತಮ ಸಂಸ್ಕಾರವAತರಾಗಿ, ಒಳ್ಳೆಯ …

Read More »

ರಮೇಶ ಜಾರಕಿಹೊಳಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸುತ್ತಿದ್ದಾರೆ- ಜಗದೀಶ ಸಾತಿಹಾಳ.!

ರಮೇಶ ಜಾರಕಿಹೊಳಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸುತ್ತಿದ್ದಾರೆ- ಜಗದೀಶ ಸಾತಿಹಾಳ.! ಗೋಕಾಕ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಶಾಸಕ ರಮೇಶ ಜಾರಕಿಹೊಳಿ ಅವರು, ಉಚಿತವಾಗಿ ಸ್ಫರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸುತ್ತಿದ್ದಾರೆ ಎಂದು ಉಪನ್ಯಾಸಕ ಜಗದೀಶ ಸಾತಿಹಾಳ ಹೇಳಿದರು. ಅವರು, ನಗರದ ಶ್ರೀ ಮಹಾಲಕ್ಷಿö್ಮÃ ಸಭಾ ಭವನದಲ್ಲಿ ಸ್ಫರ್ಧಾ ಗೋಕಾಕ ಕರಿಂiÀiರ್ ಅಕಾಡೆಮಿ ಮೂಲಕ ಶಾಸಕ ರಮೇಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ …

Read More »

ಆರ್‌ಡಿಪಿಆರ್‌ನಿಂದ ರಸ್ತೆಗಳ ಅಭಿವೃದ್ಧಿಗೆ 16 ಕೋಟಿ ರೂ. ಬಿಡುಗಡೆ – ಶಾಸಕ ಬಾಲಚಂದ್ರ ಜಾರಕಿಹೊಳಿ!!

ಆರ್‌ಡಿಪಿಆರ್‌ನಿಂದ ರಸ್ತೆಗಳ ಅಭಿವೃದ್ಧಿಗೆ 16 ಕೋಟಿ ರೂ. ಬಿಡುಗಡೆ – ಶಾಸಕ ಬಾಲಚಂದ್ರ ಜಾರಕಿಹೊಳಿ!! ಯುವ  ಭಾರತ ಸುದ್ದಿ ಮೂಡಲಗಿ : ಅರಭಾವಿ ವಿಧಾನಸಭಾ ಮತಕ್ಷೇತ್ರದ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ (ಆರ್‌ಡಿಪಿಆರ್)ಯಿಂದ 16 ಕೋಟಿ ರೂ.ಗಳ ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಅರಭಾವಿ ಕ್ಷೇತ್ರದಲ್ಲಿ ಹದಗೆಟ್ಟ ರಸ್ತೆಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು …

Read More »

ಇದೆ 24ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ಶಿವಪುತ್ರ ಜಕಬಾಳ.!

ಇದೆ 24ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ಶಿವಪುತ್ರ ಜಕಬಾಳ.! ಗೋಕಾಕ: ಹಿಂದುಳಿದ ಸಮುದಾಯವಾಗಿರುವ ಉಪ್ಪಾರ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಲು ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇದೆ ದಿ.೨೪ರ ಶನಿವಾರದಂದು ಹಮ್ಮಿಕೊಳ್ಳಲಾಗಿದೆ ಎಂದು ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಮಾಜದ ಅಧ್ಯಕ್ಷ ಶಿವಪುತ್ರ ಜಕಬಾಳ ಹೇಳಿದರು. ಅವರು, ಶನಿವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಕರೇದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, …

Read More »

ನಾಳೆ ಮಧ್ಯಾಹ್ನ 3ಗಂಟೆಗೆ ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಂಘದ ಪೂರ್ವಭಾವಿ ಸಭೆ.!

ನಾಳೆ ಮಧ್ಯಾಹ್ನ 3ಗಂಟೆಗೆ ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಂಘದ ಪೂರ್ವಭಾವಿ ಸಭೆ.! ಗೋಕಾಕ: ಬೆಳಗಾವಿ ಜಿಲ್ಲಾ ಮಟ್ಟದ ಉಪ್ಪಾರ ಸಮಾಜದ ಪ್ರತಿಭಾನ್ವಿತ ಎಸ್.ಎಸ್.ಎಲ್.ಸಿ ಮತ್ತು ಪಿಯೂಸಿ ವಿದ್ಯಾರ್ಥಿಗಳ 2021-22ನೇ ಸಾಲಿನ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳುವ ಕುರಿತು ದಿ.03 ಶನಿವಾರದಂದು ನಗರದ ಶ್ರೀ. ಶ್ರೀ ಲೇಪಾಕ್ಷ ಉಪ್ಪಾರ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ ೩ಗಂಟೆಗೆ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ. 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ90% ಅಂಕ ಪಡೆದ ವಿದ್ಯಾರ್ಥಿ ವಿದ್ಯಾರ್ಥಿನಿಯರು …

Read More »