ಖಾಸಗಿ ಬಸ್ ಪಲ್ಟಿ : ಬೆಳಗಾವಿಯ ಚಾಲಕ ಸಾವು ಹಾವೇರಿ : ಇಂದು ಬೆಳಗಿನ ಜಾವ ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸೇರಿ ಇಬ್ಬರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನಿಂದ ಮೀರಜ್ ಕಡೆ ತೆರಳುತ್ತಿದ್ದ ಖಾಸಗಿ ಬಸ್ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರಿಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ. ಬೆಳಗಾವಿ ಮೂಲದ …
Read More »ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ
ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ದೆಹಲಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗ್ರಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ದಾ ಮತ್ತು ಬಿಜೆಪಿ ನಾಯಕರು ಬುಧವಾರ ಮಹತ್ವದ ಸಭೆ ನಡೆಸಿ ಚರ್ಚಿಸಿದ್ದಾರೆ. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು …
Read More »ಈ ವರ್ಷದ ಭಗವದ್ಗೀತೆ ಅಭಿಯಾನದ ಕೇಂದ್ರಸ್ಥಾನ ಬೆಳಗಾವಿ – ಸ್ವರ್ಣವಲ್ಲಿ ಶ್ರೀ
ಈ ವರ್ಷದ ಭಗವದ್ಗೀತೆ ಅಭಿಯಾನದ ಕೇಂದ್ರಸ್ಥಾನ ಬೆಳಗಾವಿ – ಸ್ವರ್ಣವಲ್ಲಿ ಶ್ರೀ ಬೆಳಗಾವಿ: ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ವತಿಯಿಂದ ಪ್ರತಿ ವರ್ಷ ನಡೆಸಲಾಗುವ ರಾಜ್ಯಮಟ್ಟದ ಭಗವದ್ಗೀತೆ ಅಭಿಯಾನವನ್ನು ಈ ವರ್ಷ ಬೆಳಗಾವಿಯನ್ನು ಕೇಂದ್ರಸ್ಥಾನವಾಗಿಸಿಕೊಂಡು ನಡೆಸಲಾಗುವುದು ಎಂದು ಸ್ವರ್ಣವಲ್ಲಿ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ತಿಳಿಸಿದ್ದಾರೆ. ಮಂಗಳವಾರ ಸಂಜೆ ಬೆಳಗಾವಿಯಲ್ಲಿ ಈ ಕುರಿತು ಪೂರ್ವಭಾವಿ ಸಭೆ ನಡೆಸಿ ಈ ವಿಷಯವನ್ನು ಅವರು ಪ್ರಕಟಿಸಿದರು. ನವೆಂಬರ್ 21ರಿಂದ ಡಿಸೆಂಬರ್ 22ರವರೆಗೆ ಭಗವದ್ಘೀತೆ …
Read More »ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ
ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮೂಡಲಗಿ : ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ನಿಗದಿತ ಪ್ರಮಾಣದಲ್ಲಿ ಮಳೆಯಾಗಿ ರೈತರ ಬೆಳೆಗಳು ಸಮೃದ್ಧಿಯಾಗಿ ರೈತನ ಮೊಗದಲ್ಲಿ ಸಂತಸ ಮೂಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮಂಗಳವಾರ ಸಂಜೆ ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಅವರು, ಮಳೆಯಾಗಿ ಇಡೀ ನಾಡು ಹಸಿರಿನಿಂದ ಕಂಗೊಳಿಸಲಿ ಎಂದು …
Read More »ರಾಜ್ಯಸಭೆ ಚುನಾವಣೆಗೆ ದಿನ ನಿಗದಿ
ರಾಜ್ಯಸಭೆ ಚುನಾವಣೆಗೆ ದಿನ ನಿಗದಿ ದೆಹಲಿ: ವಿದೇಶಾಂಗ ಸಚಿವ ಎಸ್.ಜೈಶಂಕರ್ ಸೇರಿದಂತೆ ರಾಜ್ಯಸಭೆಯ 10 ಸದಸ್ಯರು ಜುಲೈ, ಆಗಸ್ಟ್‌ನಲ್ಲಿ ನಿವೃತ್ತಿಯಾಗುತ್ತಿದ್ದು, ಆ ಸ್ಥಾನಗಳಿಗೆ ಜುಲೈ 24ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ. ಗೋವಾದಿಂದ ಒಬ್ಬರು, ಗುಜರಾತ್‌ನಿಂದ ಮೂವರು, ಪಶ್ಚಿಮ ಬಂಗಾಳದಿಂದ ಆರು ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ. ಗುಜರಾತ್‌ನಿಂದ ಆಯ್ಕೆಯಾಗಿದ್ದ ಬಿಜೆಪಿಯ ಜೈಶಂಕರ್, ದಿನೇಶ್‌ಚಂದ್ರ ಜೆಮಲ್‌ಭಾಯ್ ಅನವದೀಯ, ಲೋಖಂಡವಾಲಾ ಜುಗಲ್ ಸಿನ್ಹಾ ಮಾಥೂರ್‌ಜಿ ಹಾಗೂ …
Read More »ಪ್ರತಿಪಕ್ಷ ನಾಯಕನ ಆಯ್ಕೆಗೆ ಕಸರತ್ತು
ಪ್ರತಿಪಕ್ಷ ನಾಯಕನ ಆಯ್ಕೆಗೆ ಕಸರತ್ತು ಬೆಂಗಳೂರು : ಮುಂದಿನ ವಾರ ವಿಧಾನಮಂಡಲದ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಕೊನೆ ಕ್ಷಣದ ಕಸರತ್ತು ನಡೆದಿದೆ. ಮೂರ್ನಾಲ್ಕು ದಿನಗಳಲ್ಲಿ ಘೋಷಣೆಯಾಗುವ ಸಾಧ್ಯತೆಯಿದ್ದು, ಅಂತಿಮವಾಗಿ ಯಾರ ಹೆಗಲಿಗೆ ಪ್ರತಿಪಕ್ಷದ ನಾಯಕನ ಜವಾಬ್ದಾರಿ ಬೀಳಲಿದೆ ಎಂಬುದು ಸ್ಪಷ್ಟವಾಗಲಿದೆ. ಶಾಸಕಾಂಗ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಸ್ಥಾನ ಎರಡೂ ಒಂದಕ್ಕೊಂದು ತಳಕು ಹಾಕಿಕೊಂಡಿರುವುದರಿಂದ ಜಾತಿ ಸಮೀಕರಣದ ಲೆಕ್ಕಾಚಾರ ನಡೆಯುತ್ತಿದೆ. ಲಿಂಗಾಯತ, ಒಕ್ಕಲಿಗ …
Read More »ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರದ ತೀರ್ಮಾನ
ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರದ ತೀರ್ಮಾನ ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆ ಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಈಗ ಹೆಚ್ಚುವರಿ ಅಕ್ಕಿ ಹೊಂದಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ 5 ಕೆಜಿ ಅಕ್ಕಿ ಬದಲಿಗೆ ಹಣವನ್ನು ನೀಡಲು ನಿರ್ಧರಿಸಿದೆ. ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಯನ್ನು ಬಿಪಿಎಲ್ ಕುಟುಂಬಗಳಿಗೆ ಈಗಾಗಲೇ ಉಚಿತವಾಗಿ ನೀಡಲಾಗುತ್ತಿದ್ದು, ಉಳಿದ ಹೆಚ್ಚುವರಿ …
Read More »ರುದ್ರೇಶ ಸಂಪಗಾವಿ ಅವರಿಗೆ ಮಾಧ್ಯಮ ಐಸಿರಿ ಪ್ರಶಸ್ತಿ
ರುದ್ರೇಶ ಸಂಪಗಾವಿ ಅವರಿಗೆ ಮಾಧ್ಯಮ ಐಸಿರಿ ಪ್ರಶಸ್ತಿ ಇಟಗಿ : ಇಟಗಿ ಗ್ರಾಮದ ವಿಜಯ ಕರ್ನಾಟಕದ ವರದಿಗಾರ ರುದ್ರೇಶ ಸಂಪಗಾವಿ ರಾಜ್ಯಮಟ್ಟದ ಮಾಧ್ಯಮ ಐಸಿರಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಜು. 1 ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲ ಸಂಗಮದಲ್ಲಿ ನಡೆಯಲಿರುವ ಕರುನಾಡ ಅಕ್ಷರ ಜಾತ್ರೆ ಯಲ್ಲಿ ಮಾದ್ಯಮ ಐಸಿರಿ ಪುರಸ್ಕಾರ ನಡೆಯಲಿದೆ. ಕಳೆದ 25 ವರ್ಷಗಳ ಮಾಧ್ಯಮ ಕ್ಷೇತ್ರದಲ್ಲಿ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ರುದ್ರೇಶ ಸಂಪಗಾವಿ ಅವರಿಗೆ …
Read More »ಬೆಳಗಾವಿಯಿಂದ ವಂದೇ ಭಾರತ್ ರೈಲು : ಪ್ರಹ್ಲಾದ ಜೋಶಿ
ಬೆಳಗಾವಿಯಿಂದ ವಂದೇ ಭಾರತ್ ರೈಲು : ಪ್ರಹ್ಲಾದ ಜೋಶಿ ಧಾರವಾಡ : ಬೆಂಗಳೂರು-ಹುಬ್ಬಳ್ಳಿ- ಧಾರವಾಡ ನಡುವೆ ಇಂದಿನಿಂದ ಆರಂಭವಾಗಿರುವ ವಂದೇ ಭಾರತ್ ರೈಲು ಬೆಳಗಾವಿಯಿಂದ ಆರಂಭಿಸಬೇಕು ಎಂಬ ಬೇಡಿಕೆ ಮೊದಲಿನಿಂದಲೂ ಇತ್ತು. ಕೇಂದ್ರ ಸರ್ಕಾರ ಇದನ್ನು ಬೆಳಗಾವಿಯಿಂದ ಆರಂಭಿಸದೆ ಇರುವ ಬಗ್ಗೆ ಗಡಿನಾಡು ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಬೆಳಗಾವಿ ಜನತೆ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದರು. ಬೆಳಗಾವಿ ಜನತೆಯ …
Read More »ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಬೆಳಗಾವಿ ಆರ್.ಎಲ್. ಕಾನೂನು ಕಾಲೇಜು ವಿದ್ಯಾರ್ಥಿಗಳಿಗೆ ಬಹುಮಾನ
ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಬೆಳಗಾವಿ ಆರ್.ಎಲ್. ಕಾನೂನು ಕಾಲೇಜು ವಿದ್ಯಾರ್ಥಿಗಳಿಗೆ ಬಹುಮಾನ ಬೆಳಗಾವಿ: ವಿಜಯಪುರದ ಅಂಜುಮನ್ ಕಾನೂನು ಕಾಲೇಜು ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಇತ್ತೀಚೆಗೆ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಯನ್ನು ಆಯೋಜಿಸಿತ್ತು. ಪಂದ್ಯಾವಳಿಯಲ್ಲಿ ಬೆಳಗಾವಿಯ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಬಹುಮಾನ ಪಡೆದರು. ಬಾಲಕಿಯರ ವಿಭಾಗದಲ್ಲಿ ಅನುಷಾ ಮಮದಾಪುರ, ನಿಹಾರಿಕಾ ಪಾಟೀಲ, ವಿಶಾಖ ಧವಳಿ ಮತ್ತು ಶ್ರಿಯಾ ಜೋಗಿ ಪಂದ್ಯಾವಳಿಯಲ್ಲಿ ರನ್ನರ್ ಅಪ್ …
Read More »