Breaking News

ಬಿ.ವಿ.ಬೆಲ್ಲದ ಕಾಲೇಜಿನಲ್ಲಿ ಋತುಚಕ್ರ ನೈರ್ಮಲ್ಯ ನಿರ್ವಹಣೆ ಕುರಿತ ಜಾಗೃತಿ ಕಾರ್ಯಕ್ರಮ!

Spread the love

ಬಿ.ವಿ.ಬೆಲ್ಲದ ಕಾಲೇಜಿನಲ್ಲಿ ಋತುಚಕ್ರ ನೈರ್ಮಲ್ಯ ನಿರ್ವಹಣೆ ಕುರಿತ ಜಾಗೃತಿ ಕಾರ್ಯಕ್ರಮ!

ಯುವ ಭಾರತ ಸುದ್ದಿ ಬೆಳಗಾವಿ : ಕೆಎಲ್ ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಕಾಲೇಜು ಬೆಳಗಾವಿಯ ರೋಟರಿ ಕ್ಲಬ್ ಸೌತ್ ಸಹಯೋಗದೊಂದಿಗೆ ವಿದ್ಯಾರ್ಥಿನಿಯರಿಗೆ ಋತುಚಕ್ರದ ವೇಳೆ ನೈರ್ಮಲ್ಯ ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಸೋಮವಾರ ಆಯೋಜಿಸಿತ್ತು. ಡಾ.ಅನಿತಾ ಉಮದಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಮುಟ್ಟಿನ ಸಮಯದಲ್ಲಿ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದು ಏಕೆ ಮತ್ತು ಎಷ್ಟು ಮುಖ್ಯ, ಸ್ಯಾನಿಟರಿ ಪ್ಯಾಡ್‌ಗಳ ಬಳಕೆ, ಅದರ ವಿಲೇವಾರಿ, ಗರ್ಭಕಂಠದ ಲಸಿಕೆ ಮತ್ತು ಇತರ ಹಲವು ಪ್ರಮುಖ ವಿಷಯಗಳನ್ನು ಕಾರ್ಯಕ್ರಮದಲ್ಲಿ ಚರ್ಚಿಸಿದರು.
ಪ್ರಾಚಾರ್ಯ ಡಾ.ಬಿ.ಜಯಸಿಂಹ ಸ್ವಾಗತಿಸಿ ಸಂಪನ್ಮೂಲ ವ್ಯಕ್ತಿಯನ್ನು ಸಭೆಗೆ ಪರಿಚಯಿಸಿದರು. ತೇಜಸ್ವಿನಿ ಖೇಮಾಜಿ ನಿರೂಪಿಸಿದರು. ಡಾ.ಅಶ್ವಿನಿ ಬಿ.ಹಿರೇಮಠ ವಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಮಹಿಳಾ ಸಿಬ್ಬಂದಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

2 × 1 =