Breaking News

ಮಹಿಳೆಯರಿಗೆ ದೊಡ್ಡ ಮೊತ್ತ ಘೋಷಣೆ ಮಾಡಿದ ಬಿಸಿಸಿಐ !

Spread the love

ಮಹಿಳೆಯರಿಗೆ ದೊಡ್ಡ ಮೊತ್ತ ಘೋಷಣೆ ಮಾಡಿದ ಬಿಸಿಸಿಐ !

ಯುವ ಭಾರತ ಸುದ್ದಿ ನವದೆಹಲಿ:
ಚೊಚ್ಚಲ ಪ್ರಯತ್ನದಲ್ಲೇ ಭಾರತೀಯ ವೀರ ಮಹಿಳೆಯರು ಅಪ್ರತಿಮ ಸಾಧನೆಗೈದಿದ್ದಾರೆ. ಇವರ ಸಾಧನೆಗೆ ಭಾರತೀಯ ಕ್ರಿಕೆಟ್ ಜಗತ್ತು ದೊಡ್ಡ ಸಲಾಂ ಹೇಳಿದೆ. ವಿಶ್ವ ಕಪ್ ಜಯಿಸುತ್ತಲೇ ಭಾರತೀಯ ಮಹಿಳಾ ತಂಡಕ್ಕೆ ಇದೀಗ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಜೊತೆಗೆ ಬಹುಮಾನ ಸಹ ಘೋಷಣೆಯಾಗುತ್ತಿದೆ.
19 ವರ್ಷದೊಳಗಿನ ಮಹಿಳೆಯರ ಟ್ವೆಂಟಿ-20 ವಿಶ್ವಕಪ್ ಫೈನಲ್‌ನಲ್ಲಿ ಶಫಾಲಿ ವರ್ಮಾ ನಾಯಕತ್ವದ ಭಾರತ ತಂಡ ಇಂಗ್ಲೆಂಡ್‌ ವಿರುದ್ಧ ಗೆಲುವು ಸಾಧಿಸುವ ಮೂಲಕ ಇತಿಹಾಸ ರಚಿಸಿದೆ. ಈ ಸುದ್ದಿ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಹಿಳೆಯರ ತಂಡಕ್ಕೆ ದೊಡ್ಡ ಮೊತ್ತದ ಘೋಷಣೆ ಮಾಡಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ವಿಶ್ವಕಪ್ ಗೆದ್ದಿರುವ 19 ವರ್ಷದೊಳಗಿನ ಮಹಿಳೆಯರ ತಂಡ ಮತ್ತು ಸಹಾಯಕ ಸಿಬ್ಬಂದಿಗೆ ₹5 ಕೋಟಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಇದೇ ಮೊದಲ ಆಯೋಜನೆಗೊಂಡಿರುವ ಐಸಿಸಿ ಅಂಡರ್-19 ಮಹಿಳಾ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪ್ರಶಸ್ತಿ ಎತ್ತಿ ಹಿಡಿದಿದೆ. ಇದು ಭಾರತೀಯ ಮಹಿಳಾ ಕ್ರಿಕೆಟ್ ಪಾಲಿಗೆ ಹೊಸ ಆಶಾಕಿರಣವಾಗಿದೆ. ಬರುವ ದಿನಗಳಲ್ಲಿ ಮಹಿಳಾ ಕ್ರಿಕೆಟ್ ಗೆ ಇದು ಸ್ಪೂರ್ತಿಯಾಗಿದ್ದು ಈ ನಿಟ್ಟಿನಲ್ಲಿ ಇದೀಗ ಭಾರತೀಯ ಕ್ರಿಕೆಟ್ ಮಂಡಳಿ ದೊಡ್ಡ ಮೊತ್ತವನ್ನು ನೀಡುವುದಾಗಿ ಘೋಷಿಸಿದೆ.

ಇಂಗ್ಲೆಂಡ್‌ ವಿರುದ್ಧ ಟಾಸ್‌ ಗೆದ್ದ ಭಾರತ, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 17.1 ಓವರ್‌ಗಳಲ್ಲಿ 68 ರನ್ ಗಳಿಸಿ ಆಲೌಟ್ ಆಯಿತು.

69 ರನ್‌ಗಳ ಸಾಧಾರಣ ಮೊತ್ತ ಬೆನ್ನತ್ತಿದ ಭಾರತ 14 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು ಗೆಲುವು ಸಾಧಿಸಿತು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

9 − 2 =