Breaking News

ಪ್ರವಾಹದಿಂದ ಬಾಧೆಗೊಳಗಾದ ನಿರಾಶ್ರಿತರಿಂದ ಮುಖ್ಯಮಂತ್ರಿಗಳಿಗೆ ಮನವಿ ಅರ್ಪನೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂಗೆ ಮನವಿ ಅರ್ಪಿಸಿದ ಗೋಕಾಕ-ಮೂಡಲಗಿ ತಾಲೂಕುಗಳ ಮುಖಂಡರು..!!

Spread the love

 

 

ಪ್ರವಾಹದಿಂದ ಬಾಧೆಗೊಳಗಾದ ನಿರಾಶ್ರಿತರಿಂದ ಮುಖ್ಯಮಂತ್ರಿಗಳಿಗೆ ಮನವಿ ಅರ್ಪನೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂಗೆ ಮನವಿ ಅರ್ಪಿಸಿದ ಗೋಕಾಕ-ಮೂಡಲಗಿ ತಾಲೂಕುಗಳ ಮುಖಂಡರು..!!

ಬಾಲಚಂದ್ರ ಜಾರಕಿಹೊಳಿ, ಶಾಸಕ.

 

ಯುವ ಭಾರತ ಸುದ್ದಿ   ಬೆಳಗಾವಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ 2019ರಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ನಿರಾಶ್ರಿತ ಫಲಾನುಭವಿಗಳ ಪರವಾಗಿ ಮುಖಂಡರುಗಳು ಇಂದು ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲು ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

2019 ರ ಅಗಸ್ಟ್ ತಿಂಗಳಲ್ಲಿ ನಿರಂತರ ಮಳೆ ಹಾಗೂ ಭಾರೀ ಪ್ರವಾಹದಿಂದ ಅವಳಿ ತಾಲೂಕುಗಳ ಸುಮಾರು 36 ಗ್ರಾಮಗಳ 7500 ಕ್ಕೂ ಹೆಚ್ಚು ಮನೆಗಳು ಹಾನಿಯಾಗಿದ್ದು, ಇವುಗಳಲ್ಲಿ 6500 ಫಲಾನುಭವಿಗಳ ಡೇಟಾ ಎಂಟ್ರಿ ಆಗಿದೆ. 5000 ಫಲಾನುಭವಿಗಳಿಗೆ ಮನೆಗಳ ನಿರ್ಮಾಣಕ್ಕೆ ನಿಗಮದಿಂದ ಹಣ ಬಿಡುಗಡೆಯಾಗಿದ್ದು, ಇನ್ನುಳಿದ ಫಲಾನುಭವಿಗಳಿಗೆ ಮನೆಗಳು ಮಂಜೂರಾಗಿದ್ದರೂ ಸಹ ಇದುವರೆಗೂ ಅವರ ಖಾತೆಗಳಿಗೆ ಹಣ ಬಿಡುಗಡೆಯಾಗಿಲ್ಲ. ಜೊತೆಗೆ 1000 ಫಲಾನುಭವಿಗಳ ಡಾಟಾ ಎಂಟ್ರಿ ಕೂಡ ಆಗಿಲ್ಲ. ಫಲಾನುಭವಿಗಳ ಡಾಟಾ ಎಂಟ್ರಿ ಮಾಡಿದರೂ ಸಹ 620 ಫಲಾನುಭವಿಗಳ ಹೆಸರುಗಳು ಡೆಲಿಟ್ ಅಥವಾ ಹೈಡ್ ಆಗಿದ್ದು, 120 ಫಲಾನುಭವಿಗಳ ಮನೆಗಳ ಎ, ಬಿ, ಸಿ ಕೆಟಗೆರಿಗಳ ಬದಲಾವಣೆಗಾಗಿ ನಿಗಮಕ್ಕೆ ಅರ್ಜಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. 470 ಫಲಾನುಭವಿಗಳು ಸ್ಥಳ ಬದಲಾವಣೆಗೆ ಪ್ರಸ್ತಾವಣೆ ಸಲ್ಲಿಸಿದರೂ ಸಹ ಇನ್ನೂ ಬದಲಾವಣೆಯಾಗದೇ ನಿರಾಶ್ರಿತರಾಗಿಯೇ ಉಳಿದಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಹಾನಿಗೊಳಗಾದ ಮನೆಗಳ ಫಲಾನುಭವಿಗಳಿಗೆ ಲಕ್ಷ ರೂ. ಅನುದಾನ ಮಾತ್ರ ಜಮಾ ಆಗಿದೆ ಎಂದು ನಿರಾಶ್ರಿತರ ಪರವಾಗಿ ಮುಖಂಡರುಗಳು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಡಾ.ರಾಜೇಂದ್ರ ಸಣ್ಣಕ್ಕಿ, ಗೋವಿಂದ ಕೊಪ್ಪದ, ಹನಮಂತ ತೇರದಾಳ, ಬಸವಂತ ಕಮತಿ, ರವಿ ಪರುಶೆಟ್ಟಿ ಅವರ ನೇತೃತ್ವದ ತಂಡಕ್ಕೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಕಂದಾಯ ಸಚಿವ ಆರ್.ಅಶೋಕ, ಹಿರಿಯ ಶಾಸಕ ಮತ್ತು ಮಾಜಿ ಸಚಿವ ಉಮೇಶ ಕತ್ತಿ, ಸಂಸದ ಅಣ್ಣಾಸಾಹೇಬ ಜೊಲ್ಲೆ, ವಿಧಾನಸಭಾ ಉಪಸಭಾಪತಿ ಆನಂದ ಮಾಮನಿ, ಮಹೇಶ ಕುಮಠಳ್ಳಿ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಜಿಲ್ಲಾಧಿಕಾರಿ ಡಾ.ಮಹಾಂತೇಶ ಹಿರೇಮಠ, ಸಚಿವರು, ಜಿಲ್ಲೆಯ ಶಾಸಕರುಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಳೆದ ವರ್ಷದಲ್ಲಿ ಧಾರಾಕಾರ ಮಳೆ ಮತ್ತು ಪ್ರವಾಹದಿಂದಾಗಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಸಾವಿರಾರು ಮನೆಗಳು ಜಲಾವೃತಗೊಂಡಿದ್ದವು. ನಿರಾಶ್ರಿತ ಕುಟುಂಬಗಳಿಗೆ ಅಗತ್ಯವಿರುವ ಮನೆಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳನ್ನು ಕೋರಲಾಗಿತ್ತು. ಮುಖ್ಯಮಂತ್ರಿಗಳು ಸಹ ಅನುದಾನ ಬಿಡುಗಡೆ ಮಾಡಿದರು. ಆದರೆ ಕೊರೋನಾ ಹಿನ್ನೆಲೆಯಲ್ಲಿ ನಿರಾಶ್ರಿತರಿಗೆ ಕೆಲ ತಾಂತ್ರಿಕ ಕಾರಣದಿಂದ ಸರ್ಕಾರದ ಪರಿಹಾರ ಇದುವರೆಗೂ ಬಂದಿಲ್ಲ. ಸುಮಾರು ಎರಡು ಬಾರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡಿದ್ದೇನೆ. ಜೊತೆಗೆ ವಸತಿ ಸಚಿವ ವಿ.ಸೋಮಣ್ಣ ಅವರನ್ನೂ ಸಹ ಭೇಟಿ ಮಾಡಿ ನಿರಾಶ್ರಿತರ ಸಮಸ್ಯೆಗಳನ್ನು ಆದಷ್ಟು ಬೇಗನೇ ಪರಿಹರಿಸುವಂತೆ ಮನವಿ ಮಾಡಿಕೊಂಡಿದ್ದೇನೆ. ಇಷ್ಟರಲ್ಲಿಯೇ ಎಲ್ಲವೂ ಸರಿಯಾಗಲಿದೆ’.
ಬಾಲಚಂದ್ರ ಜಾರಕಿಹೊಳಿ, ಶಾಸಕ.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

10 − 1 =