Breaking News

ಬೆಳಗಾವಿ ಭೀಮ್ಸ್ ಅಸ್ಪೆತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು

Spread the love

ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ‌. ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದ ನಿವಾಸಿ 31 ವರ್ಷದ ಅಂಜಲಿ ಪಾಟೀಲ್ ಮೃತ ದುರ್ದೈವಿ‌. ನಿನ್ನೆ ಸಂಜೆ 4 ಗಂಟೆಗೆ ಬಿಮ್ಸ್ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದ ಅಂಜಲಿ ಪಾಟೀಲ್‌ರವರಿಗೆ ರಾತ್ರಿ ಸಿಜರಿನ್ ಮೂಲಕ ವೈದ್ಯರು ಹೆರಿಗೆ ಮಾಡಿದ್ದರು. ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದ ಅಂಜಲಿ ಪಾಟೀಲ್‌ ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.ಬೆಳಗಾವಿ ತಾಲೂಕಿನ ಅಲತಗಾ ಗ್ರಾಮದ ಅಂಜಲಿ ಪಾಟೀಲ್‌ರನ್ನು ನಿಲಜಿ ಗ್ರಾಮದ ನಿಂಗಾಣಿ ಪಾಟೀಲ ಜೊತೆಗೆ ವಿವಾಹ ಮಾಡಿಕೊಡಲಾಗಿತ್ತು. 12 ವರ್ಷಗಳ ಹಿಂದೆ ನಿಂಗಾಣಿ ಜೊತೆಗೆ ಅಂಜಲಿ ವಿವಾಹವಾಗಿತ್ತು.

ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಅಂಜಲಿ ಪಾಟೀಲ್ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಶವಾಗಾರದ ಎದುರು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಬಿಮ್ಸ್ ಶವಾಗಾರದ ಎದುರು ಪ್ರತಿಭಟನೆ

ಬಿಮ್ಸ್ ಆಸ್ಪತ್ರೆಯ ಶವಾಗಾರದ ಎದುರು ನಿಲಜಿ ಗ್ರಾಮಸ್ಥರು ಹಾಗೂ ಮೃತ ಬಾಣಂತಿ ಅಂಜಲಿ ಪಾಟೀಲ್ ಸಂಬಂಧಿಕರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಕುಟುಂಬಸ್ಥರನ್ನು ಕೇಳದೇ ಸೀಜರಿನ್ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

 


Spread the love

About Yuva Bharatha

Check Also

ಶಾಸಕ ರಮೇಶ ಜಾರಕಿಹೊಳಿ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ.

Spread the loveಶಾಸಕ ರಮೇಶ ಜಾರಕಿಹೊಳಿ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ. ಗೋಕಾಕ: ತಾಲೂಕಿನ ಮಾಲದಿನ್ನಿ ಮತ್ತು …

Leave a Reply

Your email address will not be published. Required fields are marked *

five × 2 =