ಬೆಳಗಾವಿ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ಕಾಲೇಜು ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ ಗುರುವಾರ
t
ಯುವ ಭಾರತ ಸುದ್ದಿ ಬೆಳಗಾವಿ :
ಕೆಎಲ್ ಇ ಸಂಸ್ಥೆಯ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಕಾಲೇಜು ವಿದ್ಯಾರ್ಥಿ ಒಕ್ಕೂಟ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಡಿಸೆಂಬರ್ 29 ರಂದು ಬೆಳಗ್ಗೆ 9 ಕ್ಕೆ ಲಿಂಗರಾಜ ಕಾಲೇಜು ಕೇಂದ್ರ ಸಭಾಗೃಹದಲ್ಲಿ ನಡೆಯಲಿದೆ.
ಕರ್ನಾಟಕ ಸರ್ಕಾರದ ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಭಾವತಿ ಎಂ. ಹಿರೇಮಠ ಮುಖ್ಯ ಅತಿಥಿಯಾಗಿ ಆಗಮಿಸುವರು. ಕರ್ನಾಟಕ ಸರಕಾರದ ಕಾನೂನು ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ, ಎಡಿಷನಲ್ ಸಿಟಿ ಸಿವಿಲ್ ಮತ್ತು ಸೆಶನ್ಸ್ ಜಡ್ಜ್ ಪುಟ್ಟಸ್ವಾಮಿ ಉಪಸ್ಥಿತರಿರುವರು. ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ನ್ಯಾಯವಾದಿ ಆರ್.ಬಿ.ಬೆಲ್ಲದ ಅಧ್ಯಕ್ಷತೆ ವಹಿಸುವರು ಎಂದು ಪ್ರಾಚಾರ್ಯ ಡಾ. ಬಿ. ಜಯಸಿಂಹ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
YuvaBharataha Latest Kannada News