ರಾಷ್ಟ್ರಮಟ್ಟದ ಕಾನೂನು ಸ್ಪರ್ಧೆಯಲ್ಲಿ ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
ಬೆಳಗಾವಿ:
ಹುಬ್ಬಳ್ಳಿಯ ಜಿ.ಕೆ.ಕಾನೂನು ಕಾಲೇಜು ಆಯೋಜಿಸಿದ್ದ ರಾಷ್ಟ್ರಮಟ್ಟದ ಸಂಧಾನ ಸ್ಪರ್ಧೆಯಲ್ಲಿ
(National level Negotiation Competition)
ಬೆಳಗಾವಿಯ ಕರ್ನಾಟಕ ಕಾನೂನು ಸಂಸ್ಥೆಯ ಆರ್.ಎಲ್. ಕಾನೂನು ಕಾಲೇಜಿನ ವಿದ್ಯಾರ್ಥಿ ಅವಧೂತ ಗೈಧೋಳೆ ಮತ್ತು ರವಿಚಂದ್ರಗೌಡ ಪಾಟೀಲ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದರು.
ದೇಶದ ವಿವಿಧೆಡೆಯಿಂದ 24ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು.
ಆರ್.ಎಲ್.ಕಾನೂನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎಂ.ಆರ್.ಕುಲಕರ್ಣಿ, ಕಾಲೇಜಿನ ಪ್ರಾಚಾರ್ಯ ಡಾ.ಎ.ಎಚ್.ಹವಾಲ್ದಾರ್, ಅಣಕು ನ್ಯಾಯಾಲಯ ಸ್ಪರ್ಧೆಯ ಸಂಯೋಜಕಿ ಪ್ರೊ.ಅಶ್ವಿನಿ ಪರಬ್, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸಾಧನೆಗೈದ ವಿಜೇತರನ್ನು ಅಭಿನಂದಿಸಿದರು.