Breaking News

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ರಾಜ್ಯ ಸರ್ಕಾರ ನಿರ್ಧರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು-ಜಿಲ್ಲಾಧ್ಯಕ್ಷ ಮಡ್ಡೆಪ್ಪ ತೋಳಿನವರ ಆಗ್ರಹ!!

Spread the love

 

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ರಾಜ್ಯ ಸರ್ಕಾರ ನಿರ್ಧರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು-ಜಿಲ್ಲಾಧ್ಯಕ್ಷ ಮಡ್ಡೆಪ್ಪ ತೋಳಿನವರ ಆಗ್ರಹ!!

 

ಯುವ ಭಾರತ ಸುದ್ದಿ  ಬೆಳಗಾವಿ: ಬರುವ ಕನಕ ಜಯಂತಿ ಒಳಗಾಗಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ರಾಜ್ಯ ಸರ್ಕಾರ ನಿರ್ಧರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ಮಡ್ಡೆಪ್ಪ ತೋಳಿನವರ ಆಗ್ರಹಿಸಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತೋಳಿನವರ, ಸರ್ಕಾರ ಮೈಸರಿನ ಬುಡಕಟ್ಟು ಸಂಶೋಧನಾ ಸಂಸ್ಥೆಗೆ ಕುಲಶಾಸ್ತç ಅಧ್ಯಯನ ಮಾಡಲು ನೇಮಕ ಮಾಡಿದೆ. ಈಗಾಗಲೇ ಇದರ ವರದಿ ಸಿದ್ಧವಾಗಿದ್ದು, ಕೂಡಲೇ ಕುರುಬ ಸಮಾಜಕ್ಕೆ ಎಸ್‌ಟಿ ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ನ. 11 ಕನಕ ಜಯಂತಿ ಒಳಗಾಗಿ ಈ ನಿರ್ಧಾರ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಕುರುಬ ಸಮಾಜವನ್ನು ಎಸ್‌ಟಿಗೆ ಸೇರಿಸಲಾಗಿದೆ, ಬೀದರ ಜಿಲ್ಲೆಯಲ್ಲಿ ನಮ್ಮ ಸಮಾಜದ ಉಪಪಂಗಡ ಗೊಂಡ ಸಮಾಜವನ್ನು ಎಸ್‌ಟಿಗೆ ಸೇರಿಸಲಾಗಿದೆ. ಹೀಗಾಗಿ ಈಗ ಕುರುಬ ಸಮಾಜವನ್ನು ಎಸ್‌ಟಿ ಗೆ ಸೇರಿಸಿ ರಾಜ್ಯದ ಎಲ್ಲ ಕಡೆಗೂ ವಿಸ್ತರಿಸಿ ಸಮಾಜಕ್ಕೆ ನ್ಯಾಯ ಒದಗಿಸಿ ಕೊಡಬೇಕು. ಸರ್ಕಾರದ ಮುಂದೆ ನಾವು ಭಿಕ್ಷೆ ಕೇಳುತ್ತಿಲ್ಲ. ನಮ್ಮ ಹಕ್ಕು ನಮಗೆ ಒದಗಿಸಬೇಕು ಎಂದು ಆಗ್ರಹಿಸಿದರು.

ಅನೇಕ ವರ್ಷಗಳಿಂದ ಹೋರಾಟ ನಡೆದಿದ್ದು, ಸರ್ಕಾರ ಸ್ಪಂದಿಸುತ್ತಿಲ್ಲ. ಕಾಗಿನೆಲೆ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಕಾಗಿನೆಲೆಯಿಂದ ಬೆಂಗಳೂರುವರೆಗೆ ಕರ್ನಾಟಕದ ಆರು ಕಡೆಗಳಲ್ಲಿ ವಿಭಾಗ ಮಟ್ಟದ ಸಮ್ಮೇಳನ ನಡೆಸಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಮ್ಮೇಳನ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ಆದರೆ ಸರ್ಕಾರ ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ. ನಮಗೆ ಈ ಕೂಡಲೇ ಮೀಸಲಾತಿ ಕಲ್ಪಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕುರುಬ ಸಮಾಜದ ಮುಖಂಡ ಡಾ. ರಾಜೇಂದ್ರ ಸಣ್ಣಕ್ಕಿ ಮಾತನಾಡಿ, ರಾಜ್ಯದಲ್ಲಿ ಕುರುಬ ಸಮಾಜ 80 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಅತಿ ಹಿಂದುಳಿದ ಸಮಾಜವಾಗಿದೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಈಗ ಸದಸ್ಯ ರಾಜ್ಯದಲ್ಲಿ 2ಎ ಮೀಸಲಾತಿ ಇದೆ, ಈ ವರ್ಗದಲ್ಲಿ ನೂರಾರು ಜಾತಿಗಳಿವೆ. ಪಂಚಮಸಾಲಿ ಸಮಾಜ ಹೊರತುಪಡಿಸಿ ಉಳಿದ ಎಲ್ಲ ಲಿಂಗಾಯತ ಉಪ ಪಂಗಡಗಳು 2ಎ ಮೀಸಲಾತಿಯಲ್ಲಿವೆ. ಹೀಗಾಗಿ 2ಎಯಿಂದ ಎಸ್‌ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿಗಳಿಗೆ ಮನವಿ: ಕುರುಬ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡಲು ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಘಟಕ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಗಮಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನಿಸಲಾಯಿತು.

ವಿಧಾನ ಪರಿಷತ್ ಮಾಜಿ ಸದಸ್ಯ ವಿವೇಕರಾವ ಪಾಟೀಲ, ಸಮಾಜದ ಮುಖಂಡರಾದ ಲಕ್ಷ್ಮಣರಾವ ಚಿಂಗಳೆ, ಸುಧೀರ ಗಡ್ಡೆ, ಬಸವರಾಜ ಬಸಳಿಗುಂದಿ, ಎಸ್.ಎಫ್. ಪೂಜೇರಿ, ಶಂಕರರಾವ ಹೆಗಡೆ, ಎಚ್.ಎಸ್. ನಸಲಾಪುರೆ, ಭಗವಂತ ಭಂಟೆ, ವಿನಾಯಕ ಬನಹಟ್ಟಿ, ಅಶೋಕ ಮೆಟಗುಡ್ಡ, ಸುರೇಶ ಮಾಯನ್ನವರ, ಬಾಬುರಾವ ವಾಘಮೋರೆ, ಸತ್ಯಪ್ಪ ಬಾಗೇನ್ನವರ, ಸಿದ್ದಲಿಂಗ ದಳವಾಯಿ, ಲಕ್ಷ್ಮಣ ಡಂಗೇರ, ಅಶೋಕ ಸದಲಗಿ, ವಸಂತ ದಳವಾಯಿ ಇದ್ದರು.


Spread the love

About Yuva Bharatha

Check Also

ಅಕ್ಕಾ ಅಂದ್ರೆ ಅವರೇ ಅಂತ ಯಾಕೆ ತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್-ಮಾಜಿ ಶಾಸಕ ಸಂಜಯ ಪಾಟೀಲ.!

Spread the loveನಾನು ಭಾಷಣದಲ್ಲಿ ಹೆಬ್ಬಾಳಕರ ಹೆಸರನ್ನೆ ತಗೊಂಡಿಲ್ಲ. -ಮಾಜಿ ಶಾಸಕ ಸಂಜಯ ಪಾಟೀಲ.! ಯುವಭಾರತ ಸುದ್ದಿ ಬೆಳಗಾವಿ: ನಾನು …

Leave a Reply

Your email address will not be published. Required fields are marked *

six + 13 =