ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿ ಬಂಧನ..!!

ಯುವ ಭಾರತ ಸುದ್ದಿ ಬೆಳಗಾವಿ: ಅಕ್ರಮವಾಗಿ ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಬೆಳಗಾವಿಯ ಖಡೇ ಬಜಾರ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಳಗಾವಿಯ ಆಟೋನಗರದ ವಿಶಾಲ ಹನುಮಂತ ಬೆಲೆಕರ ಬಂಧಿತ ಆರೋಪಿಯಾಗಿದ್ದು. ಶ್ರೀಗಂಧ ಮರದ ತುಂಡುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಕುರಿತು ಖಚಿತ ಮಾಹಿತಿ ಮೇರೆಗೆ ಖಡೇ ಬಜಾರ್ ಠಾಣೆ ಎಸಿಪಿ ಚಂದ್ರಪ್ಪ ನೇತೃತ್ವದಲ್ಲಿ ದಾಳಿ ಮಾಡಿ ಆರೋಪಿಗೆ ಹೆಡೆಮುರಿ ಕಟ್ಟಲಾಗಿದೆ.
ಬಂಧಿತ ಆರೋಪಿಯಿಂದ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡುಗಳು, 200 ರೂಪಾಯಿ ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತ ಆರೋಪಿ ಚಿಕ್ಕೋಡಿ ತಾಲೂಕಿನ ಗಳತಗಾ, ಭೀಮಾಪುರವಾಡಿ ಗ್ರಾಮದವನಾಗಿದ್ದು, ಸಧ್ಯ ಬೆಳಗಾವಿಯ ಆಟೋ ನಗರದಲ್ಲಿ ವಾಸವಿದ್ದಾನೆ.
ಬಂಧಿತ ಆರೋಪಿ ವಿರುದ್ಧ ಖಡೇ ಬಜಾರ್ ಪೊಲೀಸ್ ಠಾಣೆಯಲ್ಲಿ ಕಲಂ 86, 87, ಕರ್ನಾಟಕ ಅರಣ್ಯ ಕಾಯ್ದೆ 1963ರ ಪ್ರಕಾರ ದೂರು ದಾಖಲಾಗಿದ್ದು. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
YuvaBharataha Latest Kannada News