ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಗುರುತನ್ನು ಬಳಸುವಂತಿಲ್ಲ ಹೈಕೋರ್ಟ್ ಆದೇಶ !!
ಯುವ ಭಾರತ ಸುದ್ದಿ ಬೆಂಗಳೂರು: ಶಾಲೆ ಕಾಲೇಜುಗಳಲ್ಲಿ ಸಮವಸ್ತ್ರ ವಿದ್ದರೂ ಹಿಜಾಬ್ ಧರಿಸಲು ಅವಕಾಶ ನೀಡುವ ಕುರಿತಾದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್, ಗುರುವಾರ ಮಧ್ಯಂತರ ಆದೇಶ ನೀಡಿದ್ದು, ಈ ಪ್ರಕರಣದ ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನು ಬಳಸಬಾರದು ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹೇಳಿದ್ದಾರೆ.
ಮುಂದಿನ ಆದೇಶದವರೆಗೆ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಗುರುತನ್ನು ಬಳಸುವಂತಿಲ್ಲ ಎಂದು ಹಿಜಾಬ್ , ಶಾಲು ಧರಿಸಿಕೊಂಡು ಹೋಗುವಂತಿಲ್ಲ ಎಂದು ಮೌಖಿಕವಾಗಿ ಹೈಕೋರ್ಟ್ ಆದೇಶವನ್ನು ಹೊರಡಿಸಿದೆ.
ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದಿನ ವಿಚಾರಣೆಯನ್ನು ಹೈಕೋರ್ಟ್ ಮುಂದುವರಿಸಿದೆ. ಶಾಲೆ ಶೀಘ್ರವೇ ಪ್ರಾರಂಭಿಸಿ ಎಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.